This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

ಹಾವೇರಿ

ಸಾಹಿತ್ಯ ಸಮ್ಮೇಳನಕ್ಕೆ ಹೋಗುವ ಸರ್ಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ ಮಂಜೂರು – ಕೆಲ ಷರತ್ತುಗಳೊಂದಿಗೆ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಿ ಆದೇಶ ಮಾಡಿದ ರಾಜ್ಯ ಸರ್ಕಾರ

WhatsApp Group Join Now
Telegram Group Join Now

ಬೆಂಗಳೂರು

ಜನೇವರಿ 6 ರಿಂದ ಮೂರು ದಿನಗಳ ಕಾಲ ಹಾವೇರಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.ಈಗಾಗಲೇ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಎಲ್ಲಾ ಸಿದ್ದತೆಗಳು ನಡೆದಿದ್ದು ಹಾವೇರಿ ಮಧುವಣಗಿತ್ತಿಯಂತೆ ಶೃಂಗಾರಗೊಂಡಿದ್ದು ಇನ್ನೂ ಈ ಒಂದು ನುಡಿ ಜಾತ್ರೆಗೆ ಬರುವ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿ ಆದೇಶವನ್ನು ಮಾಡಿದೆ.

ಹೌದು ಜನವರಿ 6,7 ಮತ್ತು 8 ರಂದು 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.ಸಮ್ಮೇಳನದಲ್ಲಿ ಭಾಗವಹಿಸುವ ಸರ್ಕಾರಿ ನೌಕರರಿಗೆ ಷರತ್ತು ಬದ್ಧ ವಿಶೇಷ ಸಾಂದರ್ಭಿಕ ರಜೆಯನ್ನು ರಾಜ್ಯ ಸರ್ಕಾರ ಮಂಜೂರು ಮಾಡಿ ಆದೇಶವನ್ನು ಹೊರಡಿದೆ

ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವ ಸರ್ಕಾರಿ ನೌಕರರ ಸಂಖ್ಯೆ 100ಕ್ಕೆ ಮೀರದಂತೆ ವಿಶೇಷ ಸಾಂದರ್ಭಿಕ ರಜೆ ಸೌಲಭ್ಯವನ್ನು ನೀಡ ಲಾಗುತ್ತದೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು, ಕಾರ್ಯದರ್ಶಿಗಳ ಪತ್ರದ ಅನ್ವಯ ಪ್ರತಿ ವರ್ಷವೂ ಈ ರಜೆಯನ್ನು ನೀಡಲಾಗುತ್ತದೆ.

ರಜೆಗಾಗಿ ಷರತ್ತುಗಳು ಈ ಕೆಳಗಿನಂತಿವೆ.

ವಿಶೇಷ ಸಾಂದರ್ಭಿಕ ರಜೆಯು,ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವ ನೌಕರರು ಅವರ ಆಸಕ್ತಿಯ ಒಂದು ಅಥವಾ ಎರಡು ದಿನಗಳ ಅವಧಿಗೆ ಮತ್ತು ಹೋಗಿಬರುವ ಪ್ರಯಾಣಕ್ಕೆ ಬೇಕಾಗುವ ಅವಧಿಗೆ ಸೀಮಿತ ವಾಗಿರಬೇಕು.ಕನ್ನಡ ಸಾಹಿತ್ಯದ ಜ್ಞಾನ ಮತ್ತು ಅಭಿರುಚಿ ಇದ್ದು ಕನ್ನಡ ಸಾಹಿತ್ಯ ಪರಿಷತ್ತಿನಿಂದ ಆಮಂತ್ರಿಸಲ್ಪಟ್ಟ ಸರ್ಕಾರಿ ನೌಕರರಿಗೆ ಈ ರಜೆಯ ಸೌಲಭ್ಯ ನೀಡುವುದು.ಕನ್ನಡ ಸಾಹಿತ್ಯದ ಅಭಿ ರುಚಿಯುಳ್ಳ ನೌಕರರು ಕನ್ನಡ ಸಾಹಿತ್ಯ ಪರಿಷ ತ್ತಿನ ಸದಸ್ಯರಾಗಿದ್ದರೆ ಅವರಿಗೂ ಈ ಸೌಲಭ್ಯ ನೀಡುವುದು.ಯಾವುದೇ ವಿಶೇಷ ಗುರುತರ ಸರ್ಕಾರಿ ಕೆಲಸದ ಮೇಲೆ ನೇಮಿಸಲ್ಪಟ್ಟ ನೌಕರ ರಿಗೆ ಸಮ್ಮೇಳನದಲ್ಲಿ ಭಾಗವಹಿಸಲು ಅನುಮತಿ ಕೊಡಬಾರದು.ಈ ಸಮ್ಮೇಳನ ಮುಗಿದಮೇಲೆ ಸಮ್ಮೇಳನದಲ್ಲಿ ಭಾಗವಹಿಸಿದ ಸರ್ಕಾರಿ ನೌಕರ ರಿಗೆ ಸಾಹಿತ್ಯ ಪರಿಷತ್ತಿನವರು ಅಧಿಕೃತ ರಾಜರಿ ಷತ್ ಕೊಡಬೇಕು.ಈ ಅಧಾರದ ಮೇಲೆ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡುವ ಅಧಿಕಾರ ಅಧಿಕಾರಿಗಳು ಈ ರಜೆಯನ್ನು ಮಂಜೂರು ಮಾಡುವುದು, ಹಾಗೂ ಈ ರಜೆ ಪಡೆಯಲಿಚ್ಛಿಸುವ ನೌಕರರು ರಜೆ ಮಂಜೂರು ಮಾಡುವ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯತಕ್ಕದ್ದು.

ಹೀಗೆ ಕೆಲವೊಂದಿಷ್ಟು ರಜೆಗಾಗಿ ನಿಯಮಗಳನ್ನು ನೀಡಿ ಆದೇಶವನ್ನು ನೀಡಲಾಗಿದೆ.ಒಟ್ಟಾರೆ ಒಂದು ಕಡೆಗೆ ನುಡಿ ಜಾತ್ರೆಗಾಗಿ ಹಾವೇರಿ ಸಿದ್ದವಾ ಗುತ್ತಿದ್ದು ಇತ್ತ ಇದರಲ್ಲಿ ಪಾಲ್ಗೊಳ್ಳಲು ಸರ್ಕಾರಿ ನೌಕರರು ಕೂಡಾ ಸಜ್ಜಾಗಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಹಾವೇರಿ……


Google News

 

 

WhatsApp Group Join Now
Telegram Group Join Now
Suddi Sante Desk