ಹಾಸನ –
ಹಾಸನದಲ್ಲಿ ಜಿಲ್ಲಾ ಮಟ್ಟದ ಶೈಕ್ಷಣಿಕ ಕಾರ್ಯಾಗಾರ ನಡೆಯಿತು ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡ ಕಾರ್ಯ ಕ್ರಮ ವನ್ನು ಶಿಕ್ಷಣ ಸಚಿವ ಬಿ ಸಿ ನಾಗೇಶ್ ರಾಜ್ಯಾಧ್ಯಕ್ಷ ಷಡಾಕ್ಷರಿ ಅವರು ಪಾಲ್ಗೊಂಡು ಕಾರ್ಯಕ್ರಮ ಕ್ಕೆ ಚಾಲನೆ ನೀಡಿದರು
ಇದೇ ವೇಳೆ ಸಾವಿರಾರು ಶಿಕ್ಷಕರನ್ನು ಉದ್ದೇಶಿಸಿ ಮಾತನಾಡಿದರು.ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ,ಬೆಂಗಳೂರು-ಜಿಲ್ಲಾ ಘಟಕ, ಹಾಸನ-ವತಿಯಿಂದ ಈ ಒಂದು ಕಾರ್ಯ ಕ್ರಮ ವನ್ನು ಆಯೋಜನೆ ಮಾಡಲಾಗಿತ್ತು
ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸ ಲಾಗಿದ್ದ ಜಿಲ್ಲಾ ಮಟ್ಟದ ಶೈಕ್ಷಣಿಕ ಕಾರ್ಯಾಗಾ ರದಲ್ಲಿ ರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಾಕ್ಷರಿರ ವರು ಭಾಗವಹಿಸಿ ಸಾವಿರಾರು ಶಿಕ್ಷಕರನ್ನು ಉದ್ದೇಶಿಸಿ ಮಾತನಾಡಿದರು.ಈ ಸಂದರ್ಭದಲ್ಲಿ ಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ್ ರವರು ಉಪಸ್ಥಿತರಿದ್ದರು.
ಶಾಸಕರಾದ ಪ್ರೀತಂ ಜೆ. ಗೌಡರವರು ಕಾರ್ಯಕ್ರ ಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಈ ಸಂದರ್ಭ ದಲ್ಲಿ ಹಾಸನ ಸರ್ಕಾರಿ ನೌಕರರ ಸಂಘದ ಜಿಲ್ಲಾ ಧ್ಯಕ್ಷರಾದ ಕೃಷ್ಣೇಗೌಡ,ಕೇಂದ್ರ ಸಂಘದ ಹಿರಿಯ ಉಪಾಧ್ಯಕ್ಷರಾದ ಎಂ.ವಿ.ರುದ್ರಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷರಾದ ಶಂಭುಲಿಂಗನಗೌಡ,ಪ್ರೌಢಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಸಿದ್ಧಬಸಪ್ಪ.ಬಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳಾದ ಶ್ರೀಮತಿ ಸುಮತಿ, ನಾಗನಗೌಡ,ಡಿ.ಡಿ.ಪಿ.ಐ ಪ್ರಕಾಶ್ ಹಾಗೂ ಪ್ರಮುಖರು ಮುಖ್ಯ ಅತಿಥಿ ಗಳಾಗಿ ಭಾಗವಹಿಸಿದ್ದರು.
ಡಯಟ್ ನ ಹಿರಿಯ ಉಪನ್ಯಾಸಕರಾದ ಶ್ರೀಮತಿ ಗೀತಾರವರು ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಉಪನ್ಯಾಸ ನೀಡಿದರು.ವಿಶೇಷವಾಗಿ ಸಮಸ್ತ ಶಿಕ್ಷಕರನ್ನು ಸಂಘಟಿಸಿ,ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಶ್ರಮಿಸಿದ ಹಾಸನ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಅಧ್ಯಕ್ಷರಾದ ರಾಜಶೇಖರ್ ಅವರಿಗೆ ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸಲಾಯಿತು.
ಸುದ್ದಿ ಸಂತೆ ನ್ಯೂಸ್ ಹಾಸನ…..