ಬೆಂಗಳೂರು –
ಯಾವುದೇ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 200ಕ್ಕಿಂತ ಹೆಚ್ಚು ಮಕ್ಕಳಿದ್ದರಷ್ಟೇ ದೈಹಿಕ ಶಿಕ್ಷಣ ಶಿಕ್ಷಕರನ್ನು ಸರ್ಕಾರ ನೀಡುತ್ತದೆ. 200ಕ್ಕಿಂತ ಕಡಿಮೆ ಮಕ್ಕಳಿದ್ದರೆ ಅಲ್ಲಿಗೆ ಅವಕಾಶವಿಲ್ಲ. ಈಗಾ ಗಲೇ ನೇಮಕಗೊಂಡಿರುವ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾದರೆ ಅವರನ್ನು ಹೆಚ್ಚುವರಿ ಎಂದು ಪರಿಗಣಿಸಿ, ಅಗತ್ಯವಿರುವ ಶಾಲೆಗಳಿಗೆ ನಿಯೋಜಿಸಲಾಗುತ್ತಿದೆ.
200ಕ್ಕಿಂತ ಕಡಿಮೆ ಮಕ್ಕಳು ಇದ್ದರೆ ದೈಹಿಕ ಶಿಕ್ಷಣ ಶಿಕ್ಷಕರು ಬೇಡ ಎಂಬ ಇಲಾಖೆಯ ನಿರ್ಧಾರವೇ ಅವೈಜ್ಞಾನಿಕ.199 ಇರುವ ಮಕ್ಕಳು ದೈಹಿಕ ಶಿಕ್ಷಣ ತರಬೇತಿಯಿಂದ ವಂಚಿತರಾಗಬೇಕೇ ಪ್ರತಿ ಮಗುವೂ ಶಿಕ್ಷಣದಿಂದ ವಂಚಿತವಾಗಬಾರದು ಎಂಬ ಸರ್ಕಾರದ ಧ್ಯೇಯಕ್ಕೆ ಇಂತಹ ನೀತಿಗಳು ವಿರುದ್ಧವಾಗಿವೆ. ಶಿಕ್ಷಣ ವ್ಯವಸ್ಥೆ ಸಂಪೂರ್ಣ ಹಾಳಾಗುತ್ತಿರುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ.
ಹೀಗಾಗಿ ತಕ್ಷಣ ಹೆಚ್ಚುವರಿ ಶಿಕ್ಷಕರ ವರ್ಗಾವಣೆಗೆ ತಡೆಹಾಕಬೇಕು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಶಿಕ್ಷಣ ಇಲಾಖೆಯ ಆಯುಕ್ತ ಆರ್.ವಿಶಾಲ್ ಅವರಿಗೆ ಲಿಖಿತ ಪತ್ರ ಬರೆದಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..