ಬಾಗಲಕೋಟ –
ಸಚಿವ ಮುರುಗೇಶ ನಿರಾಣಿ ಮಾಲೀಕತ್ವದ ಕಾರ್ಖಾನೆಯೊಂದರಲ್ಲಿ ಡಿಸ್ಟಲರಿ ಸ್ಪೋಟ ಗೊಂಡು ಒರ್ವ ಸಾವಿಗೀಡಾದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.ಹೌದು ಜಿಲ್ಲೆಯ ಮುಧೋಳ ತಾಲ್ಲೂಕಿನಲ್ಲಿ ಈ ಒಂದು ಘಟನೆ ನಡೆದಿದೆ ಸಚಿವ ಮುರುಗೇಶ್ ನಿರಾಣಿ ಒಡೆತನದ ಡಿಸ್ಟಿಲರಿ ಘಟಕದಲ್ಲಿ ಈ ಒಂದು ಸ್ಪೋಟ ಸಂಭ ವಿಸಿದ್ದ ಘಟನೆಯಲ್ಲಿ ಕಾರ್ಖಾನೆಯಲ್ಲಿ ಓರ್ವ ಮೃತಪಟ್ಟಿದ್ದರೆ ಇನ್ನೂ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ
ಜುಂಜುರಕೊಪ್ಪಗಲ್ಲಿ ನಿವಾಸಿ ಗುರುನಾಥ ಹುಚ್ಚಣ್ಣನವರ್ ಎಂಬುವನೇ ಮೃತನಾಗಿದ್ದು ನಾಲ್ವರಿಗೆ ಗಾಯಗಳಾಗಿದ್ದು ಅವರನ್ನು ಮುಧೋಳ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಇನ್ನೂ ಈ ಒಂದು ಸುದ್ದಿಯನ್ನು ತಿಳಿದ ಇತ್ತ ಮುಧೋಳ ಪೊಲೀಸರು ಸ್ಥಳಕ್ಕೇ ಆಗಮಿಸಿ ಪರಿಶೀಲನೆ ಮಾಡಿ ಈ ಕುರಿತಂತೆ ಠಾಣೆಯಲ್ಲಿ ಪ್ರಕರಣವನ್ನು ದಾಖಲು ಮಾಡಿಕೊಂಡು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಬಾಗಲಕೋಟೆ……