ಧಾರವಾಡ –
ಧಾರವಾಡ ಹೊರವಲಯದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಭೀಕರ ಅಫಘಾತ ಸಂಭವಿಸಿದೆ.ಹೌದು ರಸ್ತೆ ಪಕ್ಕದಲ್ಲಿ ನಿಂತುಕೊಂಡಿದ್ದ ಲಾರಿಗೆ ಕಾರೊಂದು ಡಿಕ್ಕಿಯಾದ ಪರಿಣಾಮ ವಾಗಿ ಐವರು ಸಾವನ್ನಪ್ಪಿದ್ದಾರೆ.
ಸ್ಥಳದಲ್ಲಿಯೇ ಐವರು ಸಾವಿಗೀಡಾಗಿದ್ದು ಮೂವರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಧಾರವಾಡದ ತಾಲೂಕಿನ ತೇಗೂರ ಗ್ರಾಮದ ಬಳಿ ಹೆದ್ದಾರಿ ಯಲ್ಲಿ ಈ ಒಂದು ಘಟನೆ ನಡೆದಿದೆ.
ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ಕಾರು ಗುದ್ದಿದೆ.ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವಿ ಗೀಡಾಗಿದ್ದು ಪಕ್ಕದಲ್ಲಿ ಹೊರಟಿದ್ದ ಓರ್ವ ಪಾದ ಚಾರಿಗೂ ಕಾರು ಗುದ್ದಿದ್ದು ಪಾದಚಾರಿ ಸಹ ಸ್ಥಳದಲ್ಲಿ ಸಾವಿಗೀಡಾಗಿದ್ದಾರೆ.
ಬೆಳಗಾವಿಯಿಂದ ಧಾರವಾಡ ಕಡೆ ಬರುತ್ತಿದ್ದ ಕಾರು.ಸ್ಥಳಕ್ಕೆ ಗರಗ ಠಾಣೆ ಪೊಲೀಸರು ಭೇಟಿ ನೀಡಿ ಮೃತರ ಕುರಿತು ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.ಗಾಯಾಳುಗಳು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.
ಸುದ್ದಿ ಸಂತೆ ನ್ಯೂಸ್ ಧಾರವಾಡ…..