ಬೆಂಗಳೂರು –
ಸೇವಾ ನಿರತ ಪದವೀಧರ ಶಿಕ್ಷಕರನ್ನು ಪರೀಕ್ಷೆ ನಡೆಸದೇ 6 ರಿಂದ 8 ನೇ ತರಗತಿ ಶಿಕ್ಷಕರನ್ನಾಗಿ ನಿಯುಕ್ತಿಗೊಳಿಸುವ ಪ್ರಸ್ತಾಪ ಬುಧವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಮಂಡನೆಯಾಗುವುದು ಬಹುತೇಕ ಖಚಿತ ವಾಗಿದೆ.
.ಸೇವಾನಿರತ ಪದವೀಧರ ಶಿಕ್ಷಕರಲ್ಲಿ ಶೇ.40 ರಷ್ಟು ಮಂದಿಯನ್ನು ಪರೀಕ್ಷೆ ನಡೆಸದೇ 6 ರಿಂದ 8 ನೇ ತರಗತಿಗೆ ನಿಯುಕ್ತಿಗೊಳಿಸಲು ವೃಂದ ಮತ್ತು ನೇಮಕಾತಿ ನಿಯಮಗಳಿಗೆ ಬದಲಾವಣೆ ಮಾಡುವ ಪ್ರಸ್ತಾಪಕ್ಕೆ ಈಗಾಗಲೇ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ.
ಅಲ್ಲದೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸಂಸದೀಯ ವ್ಯವಹಾರಗಳ ಇಲಾಖೆ ಮತ್ತು ಆರ್ಥಿಕ ಇಲಾಖೆಯೂ ಸಮ್ಮತಿ ಸೂಚಿ ಸಿವೆ. ಶಿಕ್ಷಣ ಇಲಾಖೆಯು ಕಳೆದ ವಾರವೇ ಸಂಪುಟದ ಅನುಮೋದನೆಗಾಗಿ ಈ ಪ್ರಸ್ತಾಪ ವನ್ನು ಕ್ಯಾಬಿನೆಟ್ ಶಾಖೆಗೆ ಸಲ್ಲಿಸಿದೆ.
2017ರಲ್ಲಿ ತಿದ್ದುಪಡಿ ಮಾಡಿರುವ ಪ್ರಾಥಮಿಕ ಶಾಲಾ ಶಿಕ್ಷಕರ ವೃಂದ ಮತ್ತು ನೇಮಕಾತಿ ನಿಯ ಮದಿಂದ ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಆಗಿರುವ ಅನ್ಯಾಯವನ್ನು ಸರಿ ಪಡಿಸಲು ಮತ್ತೊಂದು ತಿದ್ದುಪಡಿ ಮಾಡುವ ಪ್ರಸ್ತಾಪ ಕೊನೆಗೂ ಅಂತಿಮ ಹಂತಕ್ಕೆ ಬಂದಂ ತಾಗಿದೆ.
ಇವತ್ತು ಅಂದರೆ ಬುಧವಾರ ಸಂಜೆ 4 ಗಂಟೆಗೆ ಸಚಿವ ಸಂಪುಟದ ಸಭೆಯು ನಿಗದಿಯಾಗಿದ್ದು ಸಭೆಯಲ್ಲಿ ಈ ಪ್ರಸ್ತಾಪವನ್ನು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಮಂಡಿಸಲಿದ್ದಾರೆ.ಈಗಾಗಲೇ ಸರ್ಕಾರ ಈ ನಿರ್ಧಾರಕ್ಕೆ ತಾತ್ವಿಕ ಒಪ್ಪಿಗೆ ಸೂಚಿಸಿರುವುದ ರಿಂದ ಸಂಪುಟ ಸಭೆಯಲ್ಲಿ ಚರ್ಚೆಯಿಲ್ಲದೇ ಇದಕ್ಕೆ ಅನುಮೋದನೆ ದೊರೆಯುವ ನಿರೀಕ್ಷೆ ಇದೆ.ತಡ ಮಾಡಿದರೆ ಚುನವಾಣೆಯ ನೀತಿ ಸಂಹಿತೆ ಜಾರಿಗೆ ಬರಬಹುದು. ಹೀಗಾಗಿ ಈ ಬಾರಿಯ ಸಚಿವ ಸಂಪುಟದ ಸಭೆಯಲ್ಲಿಯೇ ಈ ಪ್ರಸ್ತಾಪಕ್ಕೆ ಅನುಮತಿ ಪಡೆಯಲಾಗುವುದುʼ ಎಂದು ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿ ಯೊಬ್ಬರು ಸುದ್ದಿ ಸಂತೆ ಗೆ ತಿಳಿಸಿದ್ದಾರೆ.
ಈ ಕುರಿತ ಸರ್ಕಾರದ ನಿರ್ಧಾರಕ್ಕಾಗಿ ಕಳೆದ ಇಪ್ಪತ್ತು ಇಪ್ಪತ್ತೈದು ವರ್ಷಗಳಿಂದ ಶಾಲೆಗಳಲ್ಲಿ ಬೋಧಿಸುತ್ತಿರುವ ಸುಮಾರು 75 ಸಾವಿರಕ್ಕೂ ಹೆಚ್ಚು ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರು ಕಾತುರದಿಂದ ಎದುರು ನೋಡು ತ್ತಿದ್ದಾರೆ.ಸಚಿವ ಸಂಪುಟದ ಸಭೆಯಲ್ಲಿ ಈ ಪ್ರಸ್ತಾಪಕ್ಕೆ ಅನುಮತಿ ನೀಡಿದ ಕೂಡಲೇ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ಬದಲಾವಣೆ ಮಾಡಿ ಕರಡು ಅಧಿಸೂಚನೆ ಪ್ರಕಟಿಸಲಾಗುತ್ತದೆ. ಇದಕ್ಕೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡ ಲಿದ್ದು ಹದಿನೈದು ದಿನಗಳ ನಂತರ ಬಂದ ಆಕ್ಷೇ ಪಣೆಗಳನ್ನು ಪರಿಶೀಲಿಸಿ, ಅಂತಿಮ ಅಧಿಸೂಚನೆ ಪ್ರಕಟಿಸಲಾಗುತ್ತದೆ. ಆ ನಂತರವಷ್ಟೇ ಬಡ್ತಿ ಪ್ರಕ್ರಿಯೆ ಪ್ರಾರಂಭವಾಗಲಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..