ಬೆಂಗಳೂರು –
ಹೌದು ನಾಳೆ ನಡೆಯಬೇಕಾಗಿದ್ದ 2022-23ನೇ ಸಾಲಿನ 5 ಮತ್ತು 8ನೇ ತರಗತಿಗಳ ಮೌಲ್ಯಾಂಕನ ಪರೀಕ್ಷೆಯನ್ನು ಮುಂದೂಡಲಾಗಿದೆ. ವಿದ್ಯಾರ್ಥಿ ಗಳಿಗೆ ನಡೆಸಲು ಉದ್ದೇಶಿಸಲಾಗಿದ್ದಂತ ಮೌಲ್ಯಾಂಕನ ಕಾರ್ಯವನ್ನು ಮುಂದೂಡಿಕೆ ಮಾಡಿ ಶಿಕ್ಷಣ ಇಲಾಖೆ ಆದೇಶಿಸಿದೆ.
ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಆದೇಶ ಹೊರಡಿಸಲಾಗಿದ್ದು ಹೈಕೋರ್ಟ್ ಆದೇಶದಂತೆ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಮಾ.13 ರಿಂದ ನಿಗದಿ ಪಡಿಸಲಾಗಿದ್ದಂತ ಮೌಲ್ಯಾಂಕನ ವನ್ನು ಮುಂದೂಡಲಾಗಿದೆ. ನ್ಯಾಯಾಲಯವು ಅನುಮತಿಸಿದಲ್ಲಿ ಈ ಮೌಲ್ಯಾಂಕನವನ್ನು ನಡೆಸುವ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಈ ಮೌಲ್ಯಾಂಕನವು ವಿದ್ಯಾರ್ಥಿಗಳ ಕಲಿಕಾ ಮಟ್ಟ, ಕಲಿಕಾ ನ್ಯೂನ್ಯತೆಗಳು ಹಾಗೂ ಯಾವ ವಿಷಯದಲ್ಲಿ ಹಿನ್ನಡೆಯುಂಟಾಗಿದ್ದು ಯಾವುದೇ ವಿದ್ಯಾರ್ಥಿಯನ್ನು ಅನುತ್ತೀರ್ಣಗೊಳಿಸುವುದು ಈ ಮೌಲ್ಯಾಂಕನದ ಉದ್ದೇಶವಾಗಿರುವುದಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದೆ.
ಅಂದಹಾಗೇ ನಿನ್ನೆ 5 ಮತ್ತು 8ನೇ ತರಗತಿ ಮೌಲ್ಯಾಂಕನದ ಬಗ್ಗೆ ಹೈಕೋರ್ಟ್ ನಲ್ಲಿ ಸಲ್ಲಿಕೆಯಾಗಿದ್ದಂತ ಅರ್ಜಿಯ ವಿಚಾರಣೆಯನ್ನು ನ್ಯಾಯಪೀಠವು ನಡೆಸಿತ್ತು ಈ ಬಳಿಕ 5 ಮತ್ತು 8ನೇ ತರಗತಿಯ ಮೌಲ್ಯಾಂಕನವನ್ನು ರದ್ದು ಗೊಳಿಸಿ ಆದೇಶಿಸಿತ್ತು ಈ ಬೆನ್ನಲ್ಲೇ ಶಿಕ್ಷಣ ಇಲಾಖೆ ಯಿಂದ ಮೌಲ್ಯಾಂಕನ ಕಾರ್ಯವನ್ನು ಮುಂದೂ ಡಿಕೆ ಮಾಡಿ ಇಂದು ಆದೇಶಿಸಲಾಗಿದ್ದು ಮುಂದೇ ನಾಗುತ್ತದೆ ಎಂಬೊದನ್ನು ಕಾದು ನೋಡಬೇಕಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..