ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್ – 7 ಜನ ಸಂಪುಟ ಸೇರ್ಪಡೆ – ಬುಧವಾರ ಪ್ರಮಾಣ ವಚನ ಸ್ವೀಕಾರ – BSY ಹೇಳಿಕೆ

Suddi Sante Desk

ಬೆಂಗಳೂರು –

ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ.7 ಜನ ಸಂಪುಟದಲ್ಲಿ ಹೊಸದಾಗಿ ಸೇರ್ಪಡೆಯಾಗಲಿದ್ದಾರಂತೆ .ಇವರೆಲ್ಲರೂ ಸಚಿವರಾಗಿ ಬುಧವಾರ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆಂದು ಮುಖ್ಯಮಂತ್ರಿ BSY ಹೇಳಿದರು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದೆಹಲಿ ಭೇಟಿ ಸಫಲವಾಗಿದ್ದು, ಬುಧವಾರ ಸಚಿವ ಸಂಪುಟ ವಿಸ್ತರಣೆಗೆ ಬಿಜೆಪಿ ವರಿಷ್ಠರು ಅನುಮತಿ ನೀಡಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಗೃಹ ಸಚಿವ ಅಮಿತ್ ಷಾರನ್ನು ಭೇಟಿ ಮಾಡಿದ್ದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಚಿವ ಸಂಪುಟ ವಿಸ್ತರಣೆಗೆ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆ ಮೂಲಕ ಹಲವು ದಿನಗಳಿಂದ ಸಚಿವರಾಗಲು ಕಾಯುತ್ತಿದ್ದವರಿಗೆ ಶುಕ್ರದೆಸೆ ಬಂದೊದಗಿದೆ.

ವರಿಷ್ಠರ ಭೇಟಿ ನಂತರ ಬೆಂಗಳೂರಿಗೆ ವಾಪಾಸಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, 7 ಜನರು ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ. ಬುಧವಾರ ಮಧ್ಯಾಹ್ನ 7 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಾಳೆ ಯಾರೆಲ್ಲ ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ ಎಂಬ ಪಟ್ಟಿ ನೀಡುತ್ತೇನೆ ಎಂದೂ ಸ್ಪಷ್ಟಪಡಿಸಿದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.