ಬೆಂಗಳೂರು –
ಕರ್ನಾಟಕದ ಸರ್ಕಾರಿ ನೌಕರರಿಗೆ ಮಾರ್ಚ್ 20 ರಂದು ಒಂದು ದಿನದ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲಾಗಿದೆ. ವಿಧಾನಸೌಧದಲ್ಲಿ ನಡೆಯುವ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅನುಕೂಲವಾಗವಂತೆ ರಜೆಯನ್ನು ಮಂಜೂರು ಮಾಡಲಾಗಿದೆ.ಜಿ. ಸುಧಾ ಸರ್ಕಾರದ ಉಪ ಕಾರ್ಯದರ್ಶಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಆಡಳಿತ ಸುಧಾರಣೆ) ಈ ಕುರಿತು ಸುತ್ತೋಲೆ ಹೊರಡಿಸಿದ್ದಾರೆ.
ಈ ಸುತ್ತೋ ಲೆಯನ್ನು ಆರ್ಥಿಕ ಇಲಾಖೆಯ ಹಿಂಬರಹ ಸಂಖ್ಯೆ: ಆಇ 239 ವೆಚ್ಚ 12/2023, ದಿನಾಂಕ 17/03/2023ರಲ್ಲಿ ನೀಡಿರುವ ಸಹಮ ತಿಯೊಂದಿಗೆ ಹೊರಡಿಸಲಾಗಿದೆ ಎಂದು ತಿಳಿಸಿ ದ್ದಾರೆ.ದಿನಾಂಕ 20/03/2023ರಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚ ರಣೆಯ ಕಾರ್ಯಕ್ರಮವನ್ನು ಬ್ಯಾಂಕ್ವೆಟ್ ಹಾಲ್, ವಿಧಾನಸೌಧ, ಬೆಂಗಳೂರು ಇಲ್ಲಿ ಆಚರಿಸಲು ನಿರ್ಧರಿಸಲಾಗಿದೆ.
ಈ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಬೆಂಗಳೂರು ನಗರ ವ್ಯಾಪ್ತಿಯ ಮಹಿಳಾ ಅಧಿಕಾರಿ,ಸರ್ಕಾರಿ ನೌಕರರು ಕಡ್ಡಾಯವಾಗಿ ಹಾಜರಾತಿ ಪಮಾಣ ಪತ್ರವನ್ನು ಸಲ್ಲಿಸುವ ಷರತ್ತಿಗೊಳಪಟ್ಟು ಭಾಗವಹಿಸಲು ಒಂದು ದಿನದ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲಾಗಿದೆ ಎಂದು ಸುತ್ತೋಲೆ ಯಲ್ಲಿ ತಿಳಿಸಲಾಗಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..