ಬಳ್ಳಾರಿ-
ಬಳ್ಳಾರಿಯ ಸಂಡೂರು ತಾಲೂಕಿನಲ್ಲಿ ಹತ್ತಿ ಮತ್ತು ಮೆಣಸಿನ ಬೆಳೆಯ ಮಧ್ಯೆ ಅಕ್ರಮವಾಗಿ ಬೆಳೆದಿದ್ದ ಗಾಂಜಾ ಬೆಳೆಯನ್ನು ಸಂಡೂರು
ಅಬಕಾರಿ ಇಲಾಖೆಯ ಅಧಿಕಾರಿಗಳು ದಾಳಿ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದಾರೆ.
ದಾಳಿಯಲ್ಲಿ 7.20 ಲಕ್ಷ ರೂ. ಮೌಲ್ಯದ 49 ಕೆ.ಜಿ.ಗಾಂಜಾ ವಶಪಡಿಸಿಕೊಳ್ಳಲಾಗಿದೆ.
ಹೊಸಪೇಟೆ ಇಲಾಖೆಯ ಉಪ ಆಯುಕ್ತರ ಮಾರ್ಗದರ್ಶನದಲ್ಲಿ ನಡೆದ ದಾಳಿಯಲ್ಲಿ ಸಂಡೂರು ತಾಲೂಕಿನ ಗುಂಡ್ಲಹಳ್ಳಿ-ಬಸಾಪುರ ರಸ್ತೆಯಲ್ಲಿರುವ ದೇವಣ್ಣ ಹಾಗೂ ಬಾಲಯ್ಯ ಎಂಬವರಿಗೆ ಸೇರಿದ ಜಮೀನಿನಲ್ಲಿ ಅಕ್ರಮವಾಗಿ ಬೆಳೆಯಲಾಗಿತ್ತು.
ಬೆಳದಿದ್ದ ಗಾಂಜಾ ವಶಪಡಿಸಿಕೊಂಡಿದ್ದಾರೆ.ಸಧ್ಯ ಗಾಂಜಾದೊಂದಿಗೆ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆ ಮಾಡ್ತಾ ಇದ್ದಾರೆ.