ಬೆಂಗಳೂರು –
ಅಂಗವೈಕಲ್ಯವನ್ನುಳ್ಳ ಸರ್ಕಾರಿ ನೌಕರರಿಗೆ ಗ್ರೂಪ್-ಡಿ, ಸಿ ವೃಂದಗಳಿಗೆ ನೀಡುವ ಮುಂಬಡ್ತಿ ಯಲ್ಲಿ ಶೇ.4ರಷ್ಟು ಮೀಸಲಾತಿಯನ್ನು ಕಲ್ಪಿಸಿ ರಾಜ್ಯ ಸರ್ಕಾರ ಆದೇಶಿಸಿದೆ.ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿ ಯನ್ನು ಹೊರಡಿಸಿದ್ದಾರೆ.
ರಾಜ್ಯ ಸಿವಿಲ್ ಸೇವೆಗಳಲ್ಲಿನ ಗ್ರೂಪ್ ಡಿ ಮತ್ತು ಸಿ ವೃಂದಗಳಿಗೆ ಸೇರಿದ ಹುದ್ದೆಗಳಿಗೆ ನೀಡುವ ಮುಂಬಡ್ತಿಯಲ್ಲಿ ಎದ್ದು ಕಾಣುವ ಅಂಗವೈಕಲ್ಯ ವನ್ನುಳ್ಳ ಸರ್ಕಾರಿ ನೌಕರರಿಗೆ ಶೇ.4ರಷ್ಟು ಮೀಸ ಲಾತಿ ನೀಡಲಾಗಿರುವುದಾಗಿ ಹೇಳಿದ್ದಾರೆ.
ಇನ್ನೂ ಮೀಸಲಾತಿಗೆ ಕೆಲ ಷರತ್ತುಗಳನ್ನು ವಿಧಿಸ ಲಾಗಿದ್ದು ರಾಜ್ಯ ಸಿವಿಲ್ ಸೇವೆಗಳಲ್ಲಿನ ಹುದ್ದೆಗ ಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 2016ರ ಅಧಿನಿ ಯಮದ ಅನುಸೂಚಿಯಲ್ಲಿ ನಿರ್ಧಿಷ್ಟಪಡಿಸ ಲಾದ ಎದ್ದುಕಾಣುವ ಅಂಗವೈಕಲ್ಯವನ್ನುಳ್ಳ ಸರ್ಕಾರಿ ನೌಕರರಿಗೆ ಮುಂಬಡ್ತಿಯಲ್ಲಿ ಮೀಸ ಲಾತಿ ಆಸ್ಪದವು ಅನ್ವಯವಾಗುತ್ತದೆ ಎಂದಿದ್ದಾರೆ.
ಕರ್ನಾಟಕ ಸರ್ಕಾರ ಸಚಿವಾಲಯದ ಮಹಿಳೆ ಯರ ಮತ್ತು ಮಕ್ಕಳ ಅಭವೃದ್ಧಿ ವಿಶೇಷ ಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯು ಅಂಗವೈಕಲ್ಯವನ್ನುಳ್ಳ ವ್ಯಕ್ತಿಗಳಿಂದ ಭರ್ತಿ ಮಾಡಬಹುದಾದ ಹುದ್ದೆಗಳನ್ನು ಗುರುತಿಸಿ ಹೊರಡಿಸಲಾದ ಅಧಿಸೂಚನೆಯಲ್ಲಿ ಒಳಗೊಂಡ ಹುದ್ದೆಗಳಿಗೆ ಮಾತ್ರ ಮುಂಬಡ್ತಿಯಲ್ಲಿ ಮೀಸಲಾತಿ ಅನ್ವಯವಾಗುತ್ತದೆ ಎಂದಿದ್ದಾರೆ.
ಮೀಸಲಾತಿ ಅಡಿಯಲ್ಲಿ ಮುಂಬಡ್ತಿ ಕೋರುವಂತ ಸರ್ಕಾರಿ ನೌಕರರು ಪ್ರಾಧಿಕಾರಕ್ಕೆ ಅರ್ಜಿಯನ್ನು ಸಲ್ಲಿಸಿ ಅಂಗವೈಕಲ್ಯವನ್ನುಳ್ಳ ಬಗ್ಗೆ ಪ್ರಮಾಣಪ ತ್ರವನ್ನು ಪಡೆದು, ಸಲ್ಲಿಸುವುದು ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ಗ್ರೂಪ್-ಸಿ ಮತ್ತು ಡಿ ಹುದ್ದೆಗಳಿಗೆ ನೇರ ನೇಮಕಾತಿಯ ಪ್ರಮಾಣವನ್ನು ನಿಗದಿಪಡಿಸಿದ್ದಲ್ಲಿ ಹಾಗೂ ಅಂತಹ ನೇರ ನೇಮ ಕಾತಿಯ ಪ್ರಮಾಣ ಶೇ.75ರನ್ನು ಮೀರದಿದ್ದಲ್ಲಿ, ಆ ವೃಂದದ ಹುದ್ದೆಗಳಿಗೆ ಈ ಮುಂಬಡ್ತಿ ಅನ್ವಯ ವಾಗುತ್ತದೆ ಎಂದು ಹೇಳಿದ್ದಾರೆ.
ಮೀಸಲಾತಿ ಅಡಿಯಲ್ಲಿ ಮುಂಬಡ್ತಿ ಕೋರುವಂತ ಸರ್ಕಾರಿ ನೌಕರರು ಪ್ರಾಧಿಕಾರಕ್ಕೆ ಅರ್ಜಿಯನ್ನು ಸಲ್ಲಿಸಿ ಅಂಗವೈಕಲ್ಯವನ್ನುಳ್ಳ ಬಗ್ಗೆ ಪ್ರಮಾಣ ಪತ್ರವನ್ನು ಪಡೆದು ಸಲ್ಲಿಸುವುದು ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ಗ್ರೂಪ್-ಸಿ ಮತ್ತು ಡಿ ಹುದ್ದೆಗಳಿಗೆ ನೇರ ನೇಮಕಾತಿಯ ಪ್ರಮಾಣವನ್ನು ನಿಗದಿಪಡಿಸಿದ್ದಲ್ಲಿ ಹಾಗೂ ಅಂತಹ ನೇರ ನೇಮ ಕಾತಿಯ ಪ್ರಮಾಣ ಶೇ.75ರನ್ನು ಮೀರದಿದ್ದಲ್ಲಿ, ಆ ವೃಂದದ ಹುದ್ದೆಗಳಿಗೆ ಈ ಮುಂಬಡ್ತಿ ಅನ್ವಯ ವಾಗುತ್ತದೆ ಎಂದು ಹೇಳಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..