ಕಲಬುರಗಿ –
.ಹೌದು SSLC ಪರೀಕ್ಷೆಯಲ್ಲಿ ಸಾಮೂಹಿಕ ನಕಲಿಗೆ ಸಹಕರಿಸಿದ ಆರೋಪದ ಹಿನ್ನೆಲೆಯಲ್ಲಿ 16 ಶಿಕ್ಷಕರನ್ನು ಅಮಾನತು ಮಾಡಿರುವ ಘಟನೆ ಕಲಬುರಗಿ ಯಲ್ಲಿ ನಡೆದಿದೆ ಜಿಲ್ಲೆಯ ಅಫಜಲ ಪುರ ತಾಲೂಕಿನಲ್ಲಿ ಈ ಒಂದು ಘಟನೆ ನಡೆದಿದೆ
ತಾಲ್ಲೂಕಿನ ಗೊಬ್ಬರು ಎಸ್ಎಸ್ ಎಲ್ ಸಿ ಪರೀಕ್ಷಾ ಕೇಂದ್ರದ 16 ಶಿಕ್ಷಕರನ್ನು ಅಮಾನತು ಮಾಡಲಾಗಿದೆ.ಗೊಬ್ಬೂರ (ಬಿ) ಸರ್ಕಾರಿ ಪ್ರೌಢ ಶಾಲೆಯಲ್ಲಿ ಏಪ್ರಿಲ್ 3 ರಂದು ನಡೆದ ಎಸ್ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಮಾಡಲು ಅವಕಾಶಮಾಡಿಕೊಟ್ಟ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರದ ಅಧೀಕ್ಷಕರು,ಕಸ್ಟೋಡಿಯನ್, ಜಾಗೃತದಳ,ಕೋಣೆ ಮೇಲ್ವಿಚಾರಕರು ಸೇರಿ 16 ಶಿಕ್ಷಕರನ್ನು ಅಮಾನತು ಮಾಡಿ ಆದೇಶ ಹೊರಡಿ ಸಲಾಗಿದೆ.
ಸುದ್ದಿ ಸಂತೆ ನ್ಯೂಸ್ ಕಲಬುರಗಿ….