ಧಾರವಾಡ –
ರಾಜ್ಯದ ನೂತನ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಯಾಗಿ ಅಧಿಕಾರ ವಹಿಸಿಕೊಂಡ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರಿಗೆ ಧಾರವಾಡ ಜಿಲ್ಲೆಯ ನವಲಗುಂದ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಶಾಸಕ ಎನ್ ಹೆಚ್ ಕೋನರಡ್ಡಿ ಅಭಿನಂದನೆಗಳನ್ನು ಸಲ್ಲಿಸಿದರು.
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಹಾಗೂ ಉಪ ಮುಖ್ಯಮಂತಿಯಾಗಿ ಸನ್ಮಾನ್ಯ ಡಿ.ಕೆ. ಶಿವಕುಮಾರ ಅವರು ಪ್ರಮಾಣ ವಚನ ಸ್ವೀಕರಿಸಿದ ನಂತರ ಪ್ರಥಮ ಬಾರಿಗೆ ಭೇಟಿ ಯಾಗಿ ಅಭಿನಂದನೆಗಳನ್ನು ಸಲ್ಲಿಸಿದರು
ಇದೇ ವೇಳೆ ಸುಪ್ರಸಿದ್ಧ ಧಾರವಾಡ ಪೇಡೆ ನೀಡಿ ಸನ್ಮಾನಿಸಿ ಶುಭ ಕೋರಿ ಕ್ಷೇತ್ರದ ಸಮಸ್ಯೆ ಅಭಿವೃದ್ಧಿ ವಿಚಾರದಲ್ಲಿ ಸಹಾಯ ಕೋರಿದರು.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..