ಬೆಂಗಳೂರು –
ಒಡಿಶಾದ ಬಾಲಸೋರ್ ನಲ್ಲಿ ಸಂಭವಿಸಿದ ರೈಲು ದುರಂತದ ಹಿನ್ನೆಲೆಯಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ಗೆ ಮುಖ್ಯಮಂತ್ರಿ ಸಿದ್ದರಾ ಮಯ್ಯ ಪ್ರಮುಖ ವಾದ ಜವಾಬ್ದಾರಿ ಯನ್ನು ನೀಡಿದ್ದಾರೆ ಹೌದು
ತಕ್ಷಣ ಘಟನಾ ಸ್ಥಳಕ್ಕೆ ತೆರಳಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸುವಂತೆ ಹಾಗೂ ಅವರಿಗೆ ಅಗತ್ಯ ನೆರವನ್ನು ನೀಡುವಂತೆ ಸಚಿವ ಸಂತೋಷ್ ಲಾಡ್ ಅವರಿಗೆ ಸೂಚಿಸಿದ್ದಾರೆ
ಘಟನೆಯಲ್ಲಿ ಗಾಯಗೊಂಡ ಅಥವಾ ಇತರೆ ಯಾವುದೇ ಸಮಸ್ಯೆ ಎದುರಿಸುತ್ತಿರುವ ಕನ್ನಡಿಗರ ರಕ್ಷಣೆಗೆ ನಾವು ಬದ್ಧರಿದ್ದೇವೆ ಎಂಬ ಮಾತನ್ನು ಸಿದ್ದರಾಮಯ್ಯ ಹೇಳಿದ್ದು ಪ್ರತಿಯೊಬ್ಬ ಕನ್ನಡಿಗ ನನ್ನು ನಾವು ಸುರಕ್ಷಿತವಾಗಿ ನಾಡಿಗೆ ಕರೆ ತರುತ್ತೇವೆ ಎಂಬ ಮಾತಿನೊಂದಿಗೆ ಸಚಿವ ಸಂತೋಷ ಲಾಡ್ ಘಟನಾ ಸ್ಥಳಕ್ಕೆ ತೆರಳಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..