ಬೆಂಗಳೂರು –
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಗೃಹ ಸಚಿವ ಡಾ|| ಜಿ.ಪರಮೇಶ್ವರರ ಅವರನ್ನು ಭೇಟಿ ಮಾಡಿ ಕೆಲವೊಂದಿಷ್ಟು ವಿಚಾರ ಗಳ ಕುರಿತು ಚರ್ಚೆ ಯನ್ನು ಮಾಡಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಲಾಯಿತು
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಸನ್ಮಾನ್ಯ ಗೃಹ ಸಚಿವರಾದ ಡಾ|| ಜಿ.ಪರಮೇಶ್ವರ ಅವರನ್ನು ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್.ಷಡಾಕ್ಷರಿರವರ ನೇತೃತ್ವದಲ್ಲಿ ಅಭಿನಂದಿಸಲಾಯಿತು.
ಇದೇ ವೇಳೆ ಪಕ್ಷದ ಪ್ರಣಾಳಿಕೆ ಸಮಿತಿಯ ಅಧ್ಯಕ್ಷರಾಗಿದ್ದ ಡಾ|| ಜಿ.ಪರಮೇಶ್ವರರವರ ನೇತೃತ್ವದಲ್ಲಿ ರಚನೆಗೊಂಡ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ, ಎನ್.ಪಿ.ಎಸ್ ರದ್ದುಪಡಿಸಿ ಹಳೆಪಿಂಚಣಿ ಯೋಜನೆಯನ್ನು ಜಾರಿಗೊಳಿಸುವಂತೆ ಮನವಿ ಮಾಡಲಾಯಿತು.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..