ಹುಬ್ಬಳ್ಳಿ –
ಹಾಡು ಹಗಲೇ ಹುಬ್ಬಳ್ಳಿಯಲ್ಲಿ ಕೊಲೆ ಯಾಗಿದೆ ಹೌದು ಪತ್ನಿ ಯನ್ನು ಕೊಲೆ ಮಾಡಿ ಎಸ್ಕೇಪ್ ಆಗಿದ್ದಾನೆ ಪತಿರಾಯ.ಗಂಡನಿಂದ ಹೆಂಡತಿಯ ಭೀಕರ ಕೊಲೆ ನಡೆದಿದೆ.
ಹುಬ್ಬಳ್ಳಿಯ ನೇಕಾರ ನಗರದಲ್ಲಿ ಈ ಒಂದು ಘಟನೆ ನಡೆದಿದೆ.ಸುಧಾ ಶಿವಯ್ಯ ಹಿರೇಮಠ ಕೊಲೆಯಾದ ಮಹಿಳೆಯಾಗಿದ್ದಾಳೆ.ಕೌಟುಂಬಿಕ ಕಲಹವೇ ಕೊಲೆಗೆ ಕಾರಣವಾಗಿದೆ.
ಕೈಯಿಂದ ಕುತ್ತಿಗೆ ಹಿಚುಕಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದಾನೆ ಶಿವಯ್ಯ.ಪರಸ್ಪರ ಪ್ರೀತಿಸಿ ಎರಡೂ ವರೆ ವರ್ಷಗಳ ಹಿಂದೆ ಮದುವೆಯಾಗಿದ್ದ ಜೋಡಿ ಇಬ್ಬರಿಗೂ ಒಂದೂವರೆ ವರ್ಷದ ಗಂಡು ಮಗು ಇದೆ.
ಇನ್ನೂ ಸುದ್ದಿ ತಿಳಿದ ಕಸಬಾ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ರಾಘವೇಂದ್ರ ಹಳ್ಳೂರ ಮತ್ತು ಟೀಮ್ ನವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಆರೋಪಿ ಬಂಧನಕ್ಕೆ ಜಾಲ ಬೀಸಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ.