ಉಡುಪಿ –
ಅದ್ಯಾಕೋ ಏನೋ ಪೊಲೀಸ್ ಇಲಾಖೆ ಯಲ್ಲಿ ಆತ್ಮಹತ್ಯೆ ಪ್ರಕರಣ ಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ ಕೆಲಸದ ಒತ್ತಡದಿಂದಾಗಿಯೋ ಅಥವಾ ಬೇರೆ ಯಾವುದೇ ಕಾರಣಕ್ಕಾಗಿಯೋ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಕರಣ ಗಳು ನಡೆಯುತ್ತಿವೆ
ಹೌದು ಇದಕ್ಕೆ ಸಾಕ್ಷಿ ಕಾರ್ಕಳ ಟೌನ್ ಠಾಣೆಯ ಪೊಲೀಸ್ ಕಾನ್ಸ್ ಟೇಬಲ್ ಓರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಿಯ್ಯಾರು ಗ್ರಾಮದ ಮನೆ ಯಲ್ಲಿ ಪೊಲೀಸ್ ಕಾನ್ಸ್ ಟೇಬಲ್ ಪ್ರಶಾಂತ್ (48) ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ
ಬಿಪಿ, ಶುಗರ್ ನಿಂದ ಬಳಲುತ್ತಿದ್ದ ಪ್ರಶಾಂತ್ ಕಳೆದ 2 ತಿಂಗಳಿಂದ ಅನಾರೋಗ್ಯ ಕಾರಣಕ್ಕಾಗಿ ರಜೆ ಪಡೆದು ಮನೆಯಲ್ಲಿಯೇ ಇದ್ದರು.ಇದೀಗ ಏಕಾಏಕಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಾರ್ಕಳ ಟೌನ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿ ದ್ದಾರೆ.
ಸುದ್ದಿ ಸಂತೆ ನ್ಯೂಸ್ ಉಡುಪಿ…..