ಬೆಂಗಳೂರು –
ರಾಜ್ಯದಲ್ಲಿ ಕಟ್ಟಡ ಕಾರ್ಮಿಕರಿಗೆ ವಸತಿ ಸೌಲಭ್ಯ ಸೇರಿದಂತೆ ಹಲವಾರು ಮೂಲಭೂತ ಸೌಲಭ್ಯ ಗಳನ್ನು ಒದಗಿಸುವ ವಿಚಾರ ಕುರಿತು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಕಟ್ಟಡ ಕಾರ್ಮಿಕರಿಗೆ ವಸತಿ ಸೌಲಭ್ಯ ಕಲ್ಪಿಸುವ ಕುರಿತು ಸಭೆ ನಡೆಯಿತು
ಸಂತೋಷ್ ಲಾಡ್ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಒಂದು ಸಭೆಯಲ್ಲಿ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಕಟ್ಟಡ ಕಾರ್ಮಿಕರಿಗೆ ವಸತಿ ಸೌಲಭ್ಯ ಕಲ್ಪಿಸುವ ಕುರಿತು ಸಭೆ ನಡೆಯಿತು
ನಾಡಿನ ಕೈಗಾರಿಕ ವಲಯದ ಅಭಿವೃದ್ದಿ ಯಲ್ಲಿ ಕಾರ್ಮಿಕರು ಮತ್ತು ಕಟ್ಟಡ ಹಾಗೂ ಇತರೆ ನಿರ್ಮಾಣ ಕಾಮಗಾರಿಗಳಲ್ಲಿ ದುಡಿಯುವ ಕಾರ್ಮಿಕರ ಶ್ರಮ ಸಾಕಷ್ಟಿದೆ.ಕಾರ್ಮಿಕ ವಲಯದ ಶ್ರಮವನ್ನು ಪರಿಗಣಿಸಿ ಈಗಾಗಲೇ ಅವರುಗಳ ಆರೋಗ್ಯ ಹಾಗೂ ವಸತಿಯ ವಿಚಾರದಲ್ಲಿ ಸರ್ಕಾರವು ಹಲವಾರು ಕಾರ್ಯ ಕ್ರಮಗಳನ್ನು ಜಾರಿಗೆ ತಂದಿದೆ ಮತ್ತಷ್ಟು ಪರಿಣಾಮ ಕಾರಿಯಾಗಿ ಅನುಷ್ಠಾನಕ್ಕೆ ಅಧಿಕಾರಿ ಗಳಿಗೆ ಸೂಚನೆ ಯನ್ನು ನೀಡಲಾಯಿತು
1996 ರ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಾಯ್ದೆ ಹಾಗೂ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಸುಂಕ ಕಾಯ್ದೆ ಅನ್ವಯ ಕಾರ್ಮಿಕರ ಹಿತರಕ್ಷಣೆಗಾಗಿಯೇ ರಾಜ್ಯ ಸರ್ಕಾರವು 2007 ರಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯನ್ನು ರಚಿಸಿ ಕಾಲ ಕಾಲಕ್ಕೆ ಕಾರ್ಮಿಕರ ಮೂಲಭೂತ ಸೌಕರ್ಯಗಳನ್ನು ನೀಗಿಸುತ್ತಿದೆ.
ಸಭೆಯಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಕಟ್ಟಡ ಕಾರ್ಮಿಕರಿಗೆ ವಸತಿ ಸೌಲಭ್ಯ ಕಲ್ಪಿಸುವ ಕುರಿತು ವಿಸ್ತೃತವಾಗಿ ಚರ್ಚಿಸಲಾಯಿತು.ಈ ಸಭೆ ಯಲ್ಲಿ ವಸತಿ ಸಚಿವರಾದ ಜಮೀರ್ ಅಹ್ಮದ್ ಖಾನ್, ರಹೀಂ ಖಾನ್, ಪೌರಾಡಳಿತ ಸಚಿವರು, ಕಾರ್ಮಿಕ ಇಲಾಖೆ, ಪೌರಾಡಳಿತ ಇಲಾಖೆ ಮತ್ತು ವಸತಿ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿ ದ್ದರು.ಇದೇ ವೇಳೆ ನೂತನ ಸಚಿವರಿಗೆ ಇಲಾಖೆ ಯ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..