ನವದೆಹಲಿ –
ಹೌದು ಮಕ್ಕಳ ಶಾಲಾ ಪ್ರವೇಶಕ್ಕೆ ಆಧಾರ್ ಕಡ್ಡಾಯವಲ್ಲ ಹಾಗೆ ಆಧಾರ್ ಕಾರ್ಡ್ ಇಲ್ಲ ಎಂಬ ಕಾರಣಕ್ಕೆ ಯಾವುದೇ ಮಗುವಿಗೆ ಶಾಲೆಗೆ ಪ್ರವೇಶ ನಿರಾಕರಿಸಬಾರದು ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ ಮಕ್ಕಳ ಶಾಲಾ ಪ್ರವೇಶಕ್ಕೆ ಆಧಾರ್ ಕಡ್ಡಾಯವಲ್ಲ ಆಧಾರ್ ಕಾರ್ಡ್ ಇಲ್ಲ ಎಂಬ ಕಾರಣಕ್ಕೆ ಯಾವುದೇ ಮಗುವಿಗೆ ಶಾಲೆಗೆ ಪ್ರವೇಶ ನಿರಾಕರಿಸಬಾರದು ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
2018 ಮತ್ತು 2021ರಲ್ಲಿ ಈ ಕುರಿತು ಹಿಂದಿನ ಪ್ರಕಟಣೆಗಳನ್ನು ಪುನರುಚ್ಚರಿಸಿದ ಕೇಂದ್ರ ಸರ್ಕಾರವು ಕೆಲವು ಶಾಲೆಗಳು ಇನ್ನೂ ಪ್ರವೇಶ ಕ್ಕಾಗಿ ಆಧಾರ್ ಕಡ್ಡಾಯವಾಗಿ ನೀಡಬೇಕು ಎಂದು ಒತ್ತಾಯಿಸುತ್ತಿರುವ ವರದಿಗಳ ಹಿನ್ನಲೆಯಲ್ಲಿ ಈ ಸ್ಪಷ್ಟನೆ ನೀಡಿದೆ.
ಇನ್ನೂ ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ಶಿಕ್ಷಣವು ಸಂವಿಧಾನದ ಸಮಕಾಲೀನ ಪಟ್ಟಿಯ. ಲ್ಲಿದೆ ಮತ್ತು ಹೆಚ್ಚಿನ ಶಾಲೆಗಳು ಆಯಾ ರಾಜ್ಯ ಮತ್ತು ಕೇಂದ್ರಾಡಳಿತ ವ್ಯಾಪ್ತಿಗೆ ಬರುತ್ತವೆ. ಆದರೆ 05.09.2018 ರ ಸುತ್ತೋಲೆಯ ಪ್ರಕಾರ, ಆಧಾರ್ ಕಾರ್ಡ್ ಇಲ್ಲ ಎಂಬ ಕಾರಣಕ್ಕಾಗಿ ಮಕ್ಕಳಿಗೆ ಪ್ರವೇಶ ನಿರಾಕರಿಸಬಾರದು ಎಂದು ಹೇಳಿದರು.
ಯಾವುದೇ ಶಿಕ್ಷಣ ಸಂಸ್ಥೆ ಅಥವಾ ಮಂಡಳಿ ಮಕ್ಕಳ ದಾಖಲಾತಿಗೆ ಆಧಾರ್ ಕಾರ್ಡ್ ಅಗತ್ಯ ವೆಂದು ನಿಯಮ ರೂಪಿಸಿದರೆ, ಪೋಷಕರು ಸಂಬಂಧಿಸಿದ ಅಧಿಕಾರಿಗಳಿಗೆ ದೂರು ಸಲ್ಲಿಸಬ ಹುದು ಎಂಬ ಮಾಹಿತಿಯನ್ನು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಸೆಪ್ಟೆಂಬರ್ 5, 2018ರ ಪ್ರಕಟನೆಯಲ್ಲಿ ತಿಳಿಸಿತ್ತು.
ಸುದ್ದಿ ಸಂತೆ ನ್ಯೂಸ್ ನವದೆಹಲಿ…..