This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

ಧಾರವಾಡ

DHO ಕಚೇರಿಗೆ WHO ಟೀಮ್ ಭೇಟಿ ಇಲಾಖೆಯ ಮಾನಸಿಕ ಆರೋಗ್ಯ ವಿಭಾಗದ ಪ್ರಗತಿ ಪರಿಶೀಲನೆ ನಡೆಸಿದ WHO ತಂಡ…..

WhatsApp Group Join Now
Telegram Group Join Now

ಧಾರವಾಡ

DHO ಕಚೇರಿಗೆ WHO ಟೀಮ್ ಭೇಟಿ ಇಲಾಖೆಯ ಮಾನಸಿಕ ಆರೋಗ್ಯ ವಿಭಾಗದ ಪ್ರಗತಿ ಪರಿಶೀಲನೆ ನಡೆಸಿದ WHO ತಂಡ ಹೌದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾನಸಿಕ ಆರೋಗ್ಯ ಕಾರ್ಯಕ್ರ. ಮದ ಪ್ರಗತಿ ಪರಿಶೀಲನೆಯನ್ನು ವಿಶ್ವ ಆರೋಗ್ಯ ಸಂಸ್ಥೆಯ ಪ್ರತಿನಿಧಿಗಳು ಪರಿಶೀಲಿಸಿದರು.

ವಿಶ್ವ ಸಂಸ್ಥೆಯ ಜಿನಿವಾದ ಮೆಂಟಲ್ ಹೆಲ್ತ್ ಏಮರ್ಜೇನ್ಸಿ ಘಟಕದ ಕ್ಲಿನಿಕಲ್ ಸೈಕಲಾಜಿಸ್ಟ ಡಾ. ಜೇಮ್ಸ್ ಅಂಡರಹಿಲ್, ಸೈಕಿಯಾಟ್ರಿಸ್ಟ ಡಾ. ಸುದಿಪ್ತೂಚಟರ್ಜಿ ಅವರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಭೇಟಿ ನೀಡಿ ಮಾನಸಿಕ ಆರೋಗ್ಯ ಕಾರ್ಯಕ್ರಮದ ಕಾರ್ಯ ಚಟುವಟಿಕೆಗಳನ್ನು ಹಾಗೂ ಟೆಲಿಮನಸ್ ಉಚಿತ ಸಹಾಯವಾಣಿಯ ಉಪಯುಕ್ತತೆಯ ಕುರಿತಾಗಿ ಮಾಹಿತಿಯನ್ನು ಪಡೆದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಪಾಟೀಲ ಶಶಿ ಅವರು ಮಾನಸಿಕ ಆರೋಗ್ಯ ಕಾರ್ಯಕ್ರಮದ ಬಗ್ಗೆ ವಿವರಿಸಿ ಮಾನಸಿಕ ಆರೋಗ್ಯ ಕಾರ್ಯಕ್ರಮದಡಿಯಲ್ಲಿ ಮನೋಚೈತನ್ಯ ಕಾರ್ಯಕ್ರಮದಲ್ಲಿ ಉಚಿತ ಚಿಕಿತ್ಸೆ ಶಿಬಿರವನ್ನು ಎಲ್ಲಾ ತಾಲ್ಲೂಕ ಆಸ್ಪತ್ರೆಗಳು ಹಾಗೂ ಆಯ್ದ ಪ್ರಾಥಮಿಕ ಆರೋಗ್ಯ ಕೇಂದ್ರಗ ಳಲ್ಲಿ ನಡೆಸುತ್ತಿದ್ದು ಔಷಧಿಗಳ ಸೌಲಭ್ಯವುಕೂಡ ಇದೆ ಎಂದರು.

ಟೆಲಿಮನಸ್ ಸೇವೆಯ ಸೌಲಭ್ಯವನ್ನು ಹಾಗೂ ಸಹಾಯವಾಣಿಯನ್ನು 1800-89-14416 ಈ ಟೋಲ್ ಪ್ರೀನಂಬರನ್ನು ಸಮುದಾಯದಲ್ಲಿ ಜಾಗ್ರತಿ ಕಾರ್ಯಕ್ರಮಗಳ ಮೂಲಕ ಅರಿವು ಮೂಡಿಸಲಾಗುತ್ತಿದೆ.

ಈ ನಿಟ್ಟಿನಲ್ಲಿ ಮಾನಸಿಕ ಆರೋಗ್ಯದ ಸಿಬ್ಬಂದಿ ಗಳು ಕಾರ್ಯನಿರ್ವಹಿಸುತ್ತಿದ್ದಾರೆ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಅಧಿಕಾರಿ ಡಾ. ಎಸ್. ಬಿ ಕಳಸೂರಮಠ ಅವರು ಈ ಎಲ್ಲಾ ಕಾರ್ಯಚಟುವಟಿಕೆಗಳನ್ನು ನಿರಂತರವಾಗಿ ಪರಿಶೀಲಿಸುತ್ತಿದ್ದಾರೆಂದು ಮಾಹಿತಿ ನೀಡಿದರು.

ಮನೋವೈಧ್ಯೆ ಡಾ. ವೈಶಾಲಿ.ಎನ್.ಹೆಗಡೆ ಅವರು ಮಾನಸಿಕ ಆರೋಗ್ಯ ಚಟುವಟಿಕೆಗಳ ಕುರಿತಾಗಿ ವರದಿಯನ್ನು ನೀಡಿದರು.ವಿಶ್ವ ಆರೋಗ್ಯ ಸಂಸ್ಥೆಯ ಪ್ರತಿನಿಧಿಗಳು ಜಿಲ್ಲೆಯಲ್ಲಿ ಮಾನಸಿಕ ಆರೋಗ್ಯ ಕಾರ್ಯಕ್ರಮ ಚಟುವಟಿಕೆಗಳ ಬಗ್ಗೆ, ಚಿಕಿತ್ಸೆ ಸೌಲಭ್ಯದ ಬಗ್ಗೆ ಹಾಗೂ ಕಾರ್ಯಕ್ರಮ ಅನುಷ್ಠಾನದ ಬಗ್ಗೆ ಹರ್ಷ ವ್ಯಕ್ತಪಡಿಸಿದರು.

ವಿಶ್ವ ಆರೋಗ್ಯ ಸಂಸ್ಥೆಯ ತಂಡದವರೂಂದಿಗೆ ನಿಮ್ಹಾನ್ಸ ಡಾ. ಸುರೇಶ ಹಾಗೂ ಡಾ. ಮಂಜುನಾಥ ಮನೋವೈದ್ಯರು ಹಾಗೂ ಧಾರವಾಡ ಡಿಮ್ಹಾನ್ಸ್ಸ ಸಂಸ್ಥೆಯ ಡಾ. ಸುಧೀಂದ್ರ ಹುದ್ದಾರ ಮತ್ತು ಡಾ. ಶ್ರೀನಿವಾಸ ಮನೋವೈ ದ್ಯರು ಹಾಗೂ ಡಿ.ಎಮ್.ಎಚ್.ಪಿ ಎಲ್ಲಾ ಸಿಬ್ಬಂದಿಗಳು ಭಾಗಿಯಾಗಿದ್ದರು.

ಸುದ್ದಿ ಸಂತೆ ನ್ಯೂಸ್ ಧಾರವಾಡ…..


Google News

 

 

WhatsApp Group Join Now
Telegram Group Join Now
Suddi Sante Desk