ಧಾರವಾಡ –
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿ ಆಚರಣೆ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಜಯಂತಿಯನ್ನು ಆಚರಿಸಲಾಯಿತು.
ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಸಂಗೊಳ್ಳಿರಾಯಣ್ಣನ ಭಾವಚಿತ್ರಕ್ಕೆ ಪೂಜೆ ಪೂಷ್ಪಾರ್ಪಣೆಯೊಂದಿಗೆ ನಮಿಸಿ, ಗೌರಿವಿಸಿದರು.
ಶಾಸಕ ಅರವಿಂದ ಬೆಲ್ಲದ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ., ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಉಪವಿಭಾಗಾ ಧಿಕಾರಿ ಅಶೋಕ ತೇಲಿ ಹಾಗೂ ಮನಸೂರ ರೇವಣಸಿದ್ಧೇಶ್ವರ ಮಠದ ಬಸವರಾಜ ದೇವರು, ವಿವಿಧ ಸಮುದಾಯಗಳ ಮುಖಂಡರು, ಸಾರ್ವಜನಿಕರು, ಅಧಿಕಾರಿಗಳು ಭಾಗವಹಿ ಸಿದ್ದರು
ಸುದ್ದಿ ಸಂತೆ ನ್ಯೂಸ್






















