ಹುಬ್ಬಳ್ಳಿ –
ಸೌಜನ್ಯ ಕೊಲೆ ಪ್ರಕರಣ ಕುರಿತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ವತಿಯಿಂದ ಧಾರವಾಡ ದಲ್ಲಿ ಪ್ರತಿಭಟನೆ ಯನ್ನು ಹಮ್ಮಿಕೊಳ್ಳಲಾಗಿದೆ ಹೌದು ಧರ್ಮಸ್ಥಳದಲ್ಲಿ 11 ವರ್ಷಗಳ ಹಿಂದೆ ಅಪ್ರಾಪ್ತ ಬಾಲಕಿ ಅಪಹರಣ ಅತ್ಯಾಚಾರ ಮಾಡಿ ಕೊಲೆಯಾದ ಸೌಜನ್ಯಳ ಪ್ರಕರಣದ ಆರೋಪಿಗಳು ಇನ್ನು ಪತ್ತೆಯಾಗಿಲ್ಲ
ಈ ಒಂದು ಹಿನ್ನೆಲೆಯಲ್ಲಿ ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರ ಹೊಸ ತನಿಖಾ ತಂಡವನ್ನು ರಚಿಸಿ ಮರು ತನಿಖೆಗೆ ಆಗ್ರಹಿಸಬೇಕೆಂದು ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಯಲಿದೆ
ಧಾರವಾಡ ಜಿಲ್ಲಾಧಿಕಾರಿ ಇವರ ಮುಖಾಂತರ ಮುಖ್ಯಮಂತ್ರಿಗಳು ಕರ್ನಾಟಕ ಸರ್ಕಾರ ಇವರನ್ನು ಆಗ್ರಹಿಸಲು ಆಗಸ್ಟ್ 18ನೇ ತಾರೀಖಿ ನಂದು ಮುಂಜಾನೆ 12 ಗಂಟೆಗೆ ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳ ಲಾಗಿದೆ ಎಂದು ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಸುರೇಶ್ ಕೃಷ್ಣಾ ಗೋಕಾಕ್ ಹೇಳಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ…..