ಧಾರವಾಡ –
ಧಾರವಾಡ ಕೃಷಿ ಮೇಳಕ್ಕೆ ಮಹೂರ್ತ ಫೀಕ್ಸ್ – ಸೆಪ್ಟೆಂಬರ್ 9 ರಿಂದ ನಡೆಯಲಿದೆ 2023 ರ ಕೃಷಿ ಮೇಳದಲ್ಲಿ ಏನೇನಿದೆ ವಿಶೇಷತೆಯ ಕುರಿತು ಒಂದು ಕಂಪ್ಲೀಟ್ ರಿಪೋರ್ಟ್ ನಿಮಗಾಗಿ
ಹೌದು ಮತ್ತೊಂದು ಕೃಷಿ ಮೇಳಕ್ಕೆ ಧಾರವಾಡದ ಕೃಷಿ ವಿಶ್ವವಿದ್ಯಾಲಯ ಸಿದ್ದವಾಗುತ್ತಿದೆ. ಸೆಪ್ಬಂಬರ್ 9 ರಿಂದ ನಾಲ್ಕು ದಿನಗಳ ಕಾಲ ಈ ಒಂದು ಕೃಷಿ ಮೇಳ ನಡೆಯಲಿದ್ದು ಈಗಾಗಲೇ ಮೇಳಕ್ಕೆ ಎಲ್ಲಾ ಸಿದ್ದತೆಗಳನ್ನು ಕೃಷಿ ವಿವಿ ಕುಲಪತಿ ಡಾ ಪಿಎಲ್ ಪಾಟೀಲ್ ನೇತ್ರತ್ವದಲ್ಲಿ ಮಾಡಲಾಗು ತ್ತಿದೆ.
ಹೌದು ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಈ ಬಾರಿ ‘ಸುಸ್ಥಿರ ಕೃಷಿಗಾಗಿ ಸಿರಿಧಾನ್ಯಗಳು ಎಂಬ ಶೀರ್ಷಿಕೆಯೊಂದಿಗೆ 2023ರ ಕೃಷಿಮೇಳ ವನ್ನು ಆಯೋಜನೆ ಮಾಡಲಾಗಿದೆ. ಸೆಪ್ಟೆಂಬರ್ 9 ರಿಂದ 12ರ ತನಕ ಈ ಬಾರಿ ಕೃಷಿ ಮೇಳ ನಡೆಯ ಲಿದೆ.
ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆಯುವ 2023ರ ಕೃಷಿ ಮೇಳದಲ್ಲಿ ರೈತರು, ರೈತ ಮಹಿಳೆಯರು, ಗ್ರಾಮೀಣ ಯುವಕರು ಹಾಗೂ ವಿಸ್ತರಣಾ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕುಲಪತಿ ಸೇರಿದಂತೆ ಕೃಷಿ ವಿವಿ ಸಮಸ್ತ ಅಧಿಕಾರಿಗಳು ಕರೆ ನೀಡಿದ್ದಾರೆ.
ಕಳೆದ ವರ್ಷ ಸಾಕಷ್ಟು ಪ್ರಮಾಣದದಲ್ಲಿ ಮೇಳಕ್ಕೆ ರೈತರು ಸಾರ್ವಜನಿಕರು ರೈತರು ಆಗಮಿಸಿ ಮೇಳದ ಪ್ರಯೋಜನವನ್ನು ಪಡೆದುಕೊಂಡು ಕೃಷಿ ವಿವಿ ಯ ಕಾರ್ಯವನ್ನು ಶ್ಲಾಘನೆ ಮಾಡಿ ದ್ದರು ಆದರೆ ಈ ಬಾರಿಯ ಕೃಷಿಮೇಳದಲ್ಲಿ ಅಂದಾಜು 15 ಲಕ್ಷಕ್ಕಿಂತಲೂ ಹೆಚ್ಚು ರೈತರು, ರೈತ ಮಹಿಳೆಯರು, ವಿಸ್ತರಣಾ ಹಾಗೂ ಸ್ವಯಂ ಸೇವಾ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆಯನ್ನು ಹೊಂದಲಾಗಿದೆ.
ಇನ್ನೂ ಕೃಷಿಮೇಳದಲ್ಲಿ ಆದಾಯ ದ್ವಿಗುಣಗೊಳಿ ಸುವ ಎಂಬ ಕಾರ್ಯಕ್ರಮದ ವಿಶೇಷ ಸಾಧನೆ ಗೈದ ರೈತರೊಂದಿಗೆ ಚರ್ಚೆಗೆ ಅವಕಾಶ ಮಾಡಿ ಕೊಡಲಾಗುತ್ತಿದೆ.ಈ ಬಾರಿಯ ಕೃಷಿ ಮೇಳದ ವಿಶೇಷತೆಗಳನ್ನು ನೋಡೊದಾದರೆ 2023ರ ಕೃಷಿಮೇಳ ಹಲವು ಆಕರ್ಷಣೆಗಳನ್ನು ಒಳಗೊಂ ಡಿದೆ.ಅಂತರಾಷ್ಟ್ರೀಯ ಸಿರಿಧಾನ್ಯಗಳ ವರ್ಷ- 2023, ಸಾವಯವ ಕೃಷಿ ಬೆಳೆಗಳು, ಸಿರಿಧಾನ್ಯ ಉತ್ಪಾದನೆ, ಮೌಲ್ಯವರ್ಧನೆ ಹಾಗೂ ಮಾರುಕಟ್ಟೆ
ಇದರ ಜೊತೆಗೆ ಸಂಶೋಧನೆ ಮಾಡಿದ ವಿವಿಧ ತಳಿಗಳ ಹಾಗೂ ಆಧುನಿಕ ಕೃಷಿ ತಂತ್ರಜ್ಞಾನಗಳ ಮಾಹಿತಿ ಹೀಗೆ ರೈತರಿಗೆ ವಿವಿಧ ಮಾಹಿತಿ ನೀಡ ಲಾಗುತ್ತದೆ. ಹಿಂಗಾರು ಬೆಳೆಗಳ ತಾಂತ್ರಿಕತೆಗಳು, ಕಿಸಾನ್ ಡ್ರೋನ್ ಬಳಕೆ, ಬರ ನಿರ್ವಹಣಾ ತಾಂತ್ರಿಕತೆಗಳು, ಒಣ ಬೇಸಾಯ, ಜಲಾನಯನ ಅಭಿವೃದ್ಧಿ, ಮಣ್ಣು ಆರೋಗ್ಯ,
ಜಲಸಾಕ್ಷರತೆ, ಜಲ ಸಂರಕ್ಷಣೆ ತಾಂತ್ರಿಕತೆಗಳು, ಕೃಷಿ ಹಾಗೂ ತೋಟಗಾರಿಕೆ ಹುಟ್ಟುವಳಿಗಳ ರಫ್ತು ಅವಕಾಶಗಳನ್ನು ಬಿಂಬಿಸುವ ಪ್ರದರ್ಶನಗಳು ಹಾಗೂ ಅನೇಕ ವಿಶಿಷ್ಟ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಕೃಷಿ ಮೇಳದಲ್ಲಿ ಫಲ-ಪುಷ್ಪ ಮತ್ತು ತರಕಾರಿ ಬೆಳೆಗಳ ಪ್ರದರ್ಶನ, ವಿಸ್ಮಯಕಾರಿ ಕೀಟ ಪ್ರಪಂಚ, ಕೃಷಿ ಅರಣ್ಯ ಪದ್ಧತಿಗಳು, ಪರಿಸರ ಸಂರಕ್ಷಣೆ, ಕೃಷಿ ಯಂತ್ರೋ ಪಕರಣಗಳು, ಯಶಸ್ವಿ ರೈತರೊಂದಿಗೆ ಸಂವಾದ, ಕೃಷಿ ಸಮಾಲೋಚನೆ, ವಿವಿಧ ಜಾನುವಾರುಗಳ ಪ್ರದರ್ಶನ, ಹುಟ್ಟುವಳಿಗಳ ಮೌಲ್ಯವರ್ಧನೆಗಾಗಿ ಅನುಷ್ಟಾನಗೊಂಡಿರುವ ವಿವಿಧ ಪ್ರಾತ್ಯಕ್ಷಿಕೆಗಳ ವೀಕ್ಷಣೆ ಮತ್ತು ಪ್ರದರ್ಶನ, ವಸ್ತ್ರವಿನ್ಯಾಸ, ವಿವಿಧ ಸಂಘ-ಸಂಸ್ಥೆಗಳಿಂದ ಉತ್ಪನ್ನಗಳ ಮಾರಾಟ ಮಾಹಿತಿ ಇತ್ಯಾದಿ ಸಿಗಲಿವೆ.
ಕೃಷಿ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಬರುವ ಪ್ರತಿ ಜಿಲ್ಲೆಯ ಶ್ರೇಷ್ಠ ಕೃಷಿಕ ಹಾಗೂ ಶ್ರೇಷ್ಠ ಕೃಷಿ ಮಹಿಳೆಯರನ್ನು ಆಯ್ಕೆ ಮಾಡಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಇದರೊಂದಿಗೆ ವಿವಿಧ ಅಭಿವೃದ್ಧಿ ಇಲಾಖೆಗಳು, ಬೀಜ, ಗೊಬ್ಬರ, ಕೀಟ ನಾಶಕ, ಉತ್ಪಾದಿಸುವ ಘಟಕಗಳು ಮತ್ತು ಅನೇಕ ಸರಕಾರಿ ಹಾಗೂ ಸರಕಾರೇತರ ಸಂಘ ಸಂಸ್ಥೆಗಳು 450ಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವದರಿಂದ ರೈತರಿಗೆ ಸೂಕ್ತ ಮಾಹಿತಿ ಹಾಗೂ ಕೃಷಿ ಪರಿಕರ ಲಭ್ಯವಾಗಲಿವೆ.
ಇನ್ನೂ ಈ ಬಾರಿಯ ಕೃಷಿಮೇಳದಲ್ಲಿ ಮಳಿಗೆಗ ಳನ್ನು ಹಾಕುವ ಆಸಕ್ತಿ ಇದ್ದರೆ ಈ ಕೂಡಲೇ ಮಳೆಗೆಗಳನ್ನು ಕಾಯ್ದಿರಿಸಲು 0836-2214468, 8277478507 ಸಂಖ್ಯೆಗೆ ಕರೆ ಮಾಡಬಹುದಾಗಿದೆ.
ಸುದ್ದಿ ಸಂತೆ ನ್ಯೂಸ್ ಧಾರವಾಡ…..