ಅತಿಥಿ ಉಪನ್ಯಾಸಕ ನೇಮಕಕ್ಕೆ ಒತ್ತಾಯ – ABVP ಸಂಘಟನೆ ನೇತೃತ್ವದಲ್ಲಿ ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ

Suddi Sante Desk

ಹುಬ್ಬಳ್ಳಿ –

ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯಾದ್ಯಂತ ABVP ಸಂಘಟನೆ ಕರೆ ನೀಡಿರುವ ಪ್ರತಿಭಟನೆಗೆ ಹುಬ್ಬಳ್ಳಿಯಲ್ಲೂ ಬೆಂಬಲ ವ್ಯಕ್ತವಾಗಿದೆ.

ಹುಬ್ಬಳ್ಳಿಯಲ್ಲಿ ರಾಜನಗರದ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಪ್ರತಿಭಟನೆ ಮಾಡಲಾಯಿತು.ಈ ಸಂದರ್ಭದಲ್ಲಿ ರಾಜ್ಯ ಸಹ ಕಾರ್ಯದರ್ಶಿ ಕಾವ್ಯ ಜೋಷಿ ಮಾತಾನಾಡಿ ಕರ್ನಾಟಕ ರಾಜ್ಯದಲ್ಲಿ ಅತಿಥಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳುವುದರ ಮೂಲಕ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅನುವು ಮಾಡಿಕೊಡಬೇಕು ಹಾಸ್ಟೆಲ್ ನಲ್ಲಿ ಎಲ್ಲಾ ತರಗತಿಯ ವಿದ್ಯಾರ್ಥಿಗಳಿಗೆ ವಸತಿ ಕಲ್ಪಿಸಬೇಕೆಂದು ಒತ್ತಾಯವನ್ನು ಮಾಡಲಾಯಿತು.

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಹುಬ್ಬಳ್ಳಿ ಮಹಾನಗರದ ವತಿಯಿಂದ ರಾಜ್ಯದ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸರ್ಕಾರ ತಕ್ಷಣವೇ‌ ಸ್ಪಂದಿಸುವಂತೆ ಎಬಿವಿಪಿ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದ್ದು, ಎಲ್ಲಾ ಪ್ರತಿಭಾವಂತ ಹಾಗೂ ಬಡ ವಿದ್ಯಾರ್ಥಿಗಳಿಗೆ ತಕ್ಷಣ ವಿದ್ಯಾರ್ಥಿ ವೇತನವನ್ನು ನೀಡಬೇಕೆಂದು ರಾಜ್ಯ ಸರಕಾರಕ್ಕೆ ಆಗ್ರಹಿಸಿದರು.ಈ ಸಂದರ್ಭದಲ್ಲಿ ನಗರ ಸಂಘಟನಾ ಕಾರ್ಯದರ್ಶಿ ಬಸವರಾಜ್ ಡೋಣಿ ಕಾರ್ಯಾಲಯ ಕಾರ್ಯದರ್ಶಿ ಸೋಮು ಪಾಟೀಲ್ ತಾಲೂಕು ಸಂಚಾಲಕರಾದ ಸುಹಾಸ್ ನಡಕಟ್ಟಿ ನಗರ ಸಹ ಕಾರ್ಯದರ್ಶಿ ರಜತ್ ಹಿರೇಮಠ ನಗರ ವಿದ್ಯಾರ್ಥಿನಿ ಪ್ರಮುಖ ಪುಷ್ಪಾ ಗಾಡರೆಡ್ಡಿ ನಗರ ಸಂಪರ್ಕ ಪ್ರಮುಖ ರಾಕೇಶ್ ಕರ್ಜಗಿಮಠ ನಗರ ಹಾಸ್ಟೇಲ್ ಪ್ರಮುಖ ಈರಣ್ಣ ಶಿವುಕುಮಾರ ಮಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.