ಬೆಂಗಳೂರು –
ಅಕ್ಟೋಬರ್ ನಲ್ಲಿ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟಗಳು – ತುಮಕೂರಿನಲ್ಲಿ ನಡೆಯಲಿವೆ ಈ ಬಾರಿಯ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟಗಳು ಹೌದು ರಾಜ್ಯದ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟಗಳು ಅಕ್ಟೋಬರ್ ನಲ್ಲಿ ನಡೆಯ ಲಿವೆ.
ಈ ಬಾರಿ ತುಮಕೂರಿನಲ್ಲಿ ಈ ಒಂದು ರಾಜ್ಯ ಮಟ್ಟದ ಕ್ರೀಡಾಕೂಟಗಳನ್ನು ಹಮ್ಮಿಕೊಳ್ಳಲಾ ಗಿದ್ದು ಈ ಒಂದು ಕುರಿತಂತೆ ಎಲ್ಲಾ ಸಿದ್ದತೆಗಳನ್ನು ತುಮಕೂರು ಜಿಲ್ಲಾಡಳಿತ ಮತ್ತು ಯುವಜನ ಮತ್ತು ಕ್ರೀಡಾ ಇಲಾಖೆ ಮಾಡಿಕೊಳ್ಳುತ್ತಿದೆ. ತುಮಕೂರಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂ ಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಕುರಿತಂತೆ ಸುತ್ತೋಲೆಯನ್ನು ಹೊರಡಿಸು ವಂತೆ ತುಮಕೂರಿನ ಯುವಜನ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ರಾಜ್ಯ ಸರ್ಕಾರಕ್ಕೆ ಪತ್ರವನ್ನು ಬರೆದಿದ್ದಾರೆ.ಅಕ್ಟೋಬರ್ 27 ರಿಂದ ಮೂರು ದಿನಗಳ ಕಾಲ ರಾಜ್ಯ ಮಟ್ಟದ ಕ್ರೀಡಾಕೂಟಗಳು ನಡೆಯಲಿದ್ದು ರಾಜ್ಯದ ಮೂಲೆ ಮೂಲೆಗಳಿಂದ ಸರ್ಕಾರಿ ನೌಕರರು ಪಾಲ್ಗೊಳ್ಳಲಿದ್ದಾರೆ.ಹೀಗಾಗಿ ಬರುವ ಎಲ್ಲಾ ಕ್ರೀಡಾಪಟುಗಳಿಗೆ ಊಟ ವಸತಿ ಸೇರಿದಂತೆ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..