ಬೆಂಗಳೂರು –
ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದ ಬಗ್ಗೆ ಕ್ರೀಡಾ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ಮಾಡಿದ ಷಡಾಕ್ಷರಿಯವರು – ಕ್ರೀಡಾ ಇಲಾಖೆಯ ಆಯುಕ್ತರ ಕಚೇರಿಯಲ್ಲಿ ನಡೆಯಿತು ತುರ್ತು ಸಭೆ ಹಲವು ವಿಚಾರ ಕುರಿತಂತೆ ಚರ್ಚೆ
2022 ಮತ್ತು 2023ನೇ ಸಾಲಿನ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟಗಳನ್ನು ತುಮಕೂ ರಿನಲ್ಲಿ ಆಯೋಜನೆ ಮಾಡಲಾಗಿದೆ.ಈಗಾಗಲೇ ಈ ಒಂದು ಕುರಿತಂತೆ ತುಮಕೂರಿನಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿಯವರು ಜಿಲ್ಲಾ ಮಟ್ಟದಲ್ಲಿ ಸಭೆಯನ್ನು ಮಾಡಿದ್ದು ಸಧ್ಯ ಬೆಂಗಳೂರಿನಲ್ಲಿರುವ ಯುವ ಜನ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿಗಳೊಂ ದಿಗೆ ಸಭೆಯನ್ನು ಮಾಡಿದರು
ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟದ ಬಗ್ಗೆ ಮಾಹಿತಿ ಮತ್ತು ಸಿದ್ದತೆ ಕುರಿತಂತೆ ರಾಜ್ಯಾದ್ಯಕ್ಷರು ತುರ್ತು ಸಭೆಯನ್ನು ಮಾಡಿದರು.2022-23ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟ ವನ್ನು ತುಮಕೂರಿನಲ್ಲಿ ಆಯೋಜಿಸಿ ಯಶಸ್ವಿ ಗೊಳಿಸುವ ಕುರಿತು ಚರ್ಚಿಸಲು ಯುವ ಸಬಲೀ ಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರ ಕಚೇರಿಯಲ್ಲಿ ಸಭೆ ಮಾಡಲಾಯಿತು.
ಈ ಒಂದು ಸಭೆಯಲ್ಲಿ ರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಾಕ್ಷರಿ ಯವರು ಸಂಘದ ಪದಾಧಿ ಕಾರಿಗಳೊಂದಿಗೆ ಭಾಗವಹಿಸಿ ಕ್ರೀಡಾಕೂಟವನ್ನು ಅತ್ಯಂತ ಅಚ್ಚುಕಟ್ಟಾಗಿ ಸಂಘಟಿಸುವ ಬಗ್ಗೆ ಚರ್ಚಿಸಿದರು.ಈ ಸಂದರ್ಭದಲ್ಲಿ ಇಲಾಖೆಯ ಜಂಟಿ ನಿರ್ದೇಶಕರಾದ ರಮೇಶ್, ತುಮಕೂರು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ರೋಹಿತ್, ಸಂಘದ ಪದಾಧಿಕಾರಿಗಳಾದ ರುದ್ರಪ್ಪ ಬಸವರಾಜು,ಚೇತನ್ ರಾಜ್, ಮೋಹನ್ ಕುಮಾರ್ ಡಿ.ಟಿ.ಕೃಷ್ಣಮೂರ್ತಿ ಹಾಗೂ ಇತರರು ಉಪಸ್ಥಿತರಿದ್ದರು.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..