ಶಿವಮೊಗ್ಗ –
ಲೋಕಾಯುಕ್ತ ಬಲೆಗೆ ಬಿದ್ದ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ – ಕೈ ತುಂಬಾ ಸಂಬಳ ವಿದ್ದರೂ ಲಂಚಕ್ಕೆ ಕೈ ಹಾಕಿದ್ದ ಗೋಪಿನಾಥ್ ಟ್ರ್ಯಾಪ್.ಲಂಚಕ್ಕೆ ಬೇಡಿಕೆ ಇಟ್ಟಿದ್ದ ಸಮಾಜ ಕಲ್ಯಾಣ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಹೌದು ನಗರದಲ್ಲಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರೊಬ್ಬರು.15 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ.ಗೋಪಿನಾಥ್ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಧಿಕಾರಿಯಾದವರಾ ಗಿದ್ದಾರೆ.
ಬುಕ್ಲಾಪುರ ಸ್ಮಶಾನ ಅಭಿವೃದ್ಧಿ ಕಾಮಗಾರಿ ಹಣ ಬಿಡುಗಡೆಗೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಸ್ಥಳ ಪರಿಶೀಲಿಸಿ ವರದಿ ನೀಡಲು 15 ಸಾವಿರ ಬೇಡಿಕೆ ಇಟ್ಟಿದ್ದರು ಗೋಪಿನಾಥ್. ಸಮಾಜ ಕಲ್ಯಾಣ ಇಲಾಖೆಯಲ್ಲಿ ಸಹಾಯಕ ನಿರ್ದೇಶಕರಾಗಿದ್ದಾರೆ ಗೋಪಿನಾಥ್.ಶಿವಮೊಗ್ಗ ನಗರದ ವಿದ್ಯಾನಗರದಲ್ಲಿರುವ ಸಹಾಯಕ ನಿರ್ದೇಶಕರ ಗ್ರೇಡ್ 1 ಕಛೇರಿ ಯಲ್ಲಿ ಈ ಒದಂು ಟ್ರ್ಯಾಪ್ ಆಗಿದೆ.ಡಿವೈಎಸ್ಪಿ ಈಶ್ವರ್ ಉಮೇಶ್ ನಾಯ್ಕ್ ನೇತೃತ್ವದಲ್ಲಿ ಈ ಒಂದು ದಾಳಿ ನಡೆದಿದೆ.
ದೂರುದಾರನಿಂದ 15 ಸಾವಿರ ಹಣ ಪಡೆದು ಕೊಳ್ಳುವ ವೇಳೆ ದಾಳಿಯನ್ನು ಪೊಲೀಸರು ಮಾಡಿದ್ದಾರೆ ಸಧ್ಯ ಈ ಒಂದು ಅಧಿಕಾರಿಯನ್ನು ವಶಕ್ಕೆ ತಗೆದುಕೊಂಡಿದ್ಗು ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಶಿವಮೊಗ್ಗ…..