ಬೆಂಗಳೂರು –
ಸರ್ಕಾರಿ ಕಾಲೇಜಿನ ಉಪನ್ಯಾಸಕನ ಮನೆಯಲ್ಲಿ ಸಿಕ್ಕಿತು ಕೋಟಿ ಕೋಟಿ ರೂಪಾಯಿ ಮೌಲ್ಯದ ಆಸ್ತಿ ಪಾಸ್ತಿ – 12 ಕಡೆಗಳಲ್ಲಿ ನಡೆದ ದಾಳಿಯಲ್ಲಿ ಸಿಕ್ಕಿತು 8 ಕೋಟಿಗೂ ಅಧಿಕ ಆಸ್ತಿ ಪಾಸ್ತಿ ಚಿನ್ನಾ ಭರಣ ಹೌದು ರಾಜ್ಯದಲ್ಲಿ ಮತ್ತೆ ಭ್ರಷ್ಟ ಸರ್ಕಾರಿ ನೌಕರರ ಮನೆಯ ಮೇಲೆ ಲೋಕಾ ಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಮತ್ತೆ 13 ಸರ್ಕಾರಿ ಅಧಿಕಾರಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿಯನ್ನು ಮಾಡಿದ್ದು ಕೋಟ್ಯಂತರ ಮೌಲ್ಯದ ಆಸ್ತಿಯನ್ನು ಪತ್ತೆ ಮಾಡಿದ್ದಾರೆ.ಬೆಳ್ಳಂ ಬೆಳಿಗ್ಗೆ ರಾಜ್ಯಾದ್ಯಂತ ಶೋಧ ಕಾರ್ಯಾಚರಣೆ ಕೈಗೊಂಡ ಲೋಕಾ ಯುಕ್ತ ಅಧಿಕಾರಿಗಳು 13 ಸರ್ಕಾರಿ ಅಧಿಕಾರಿಗ ಳಿಗೆ ಸಂಬಂಧಿಸಿದ ವಿವಿಧ ಸ್ಥಳಗಳ ಮೇಲೆ ದಾಳಿ ನಡೆಸಿ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ವಶಕ್ಕೆ ಪಡೆದಿದ್ದಾರೆ.
ಆದಾಯಕ್ಕಿಂತ ಹೆಚ್ಚು ಆಸ್ತಿ ಸಂಪಾದಿಸಿರುವ ಗಂಭೀರ ಆರೋಪದಡಿ ರಾಜ್ಯದ ವಿವಿಧ ಜಿಲ್ಲೆಗ ಳಲ್ಲಿ ಕೆಲಸ ಮಾಡುತ್ತಿದ್ದ 13 ಸರ್ಕಾರಿ ಅಧಿಕಾರಿ ಗಳ ಮನೆ ಸಂಬಂಧಿಕರ ನಿವಾಸಗಳು ಸೇರಿದಂತೆ ಒಟ್ಟು 68 ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾ ರಿಗಳು ದಾಳಿ ನಡೆಸಿದ್ದಾರೆ.ಕೋಟ್ಯಂತರ ರೂಪಾಯಿ ಮೌಲ್ಯದ ಚರ,ಸ್ಥಿರಾಸ್ತಿಗಳನ್ನು ಕೂಡಾ ವಶಕ್ಕೆ ಪಡೆದುಕೊಂಡಿದ್ದಾರೆ.
ಇದು ಒಂದು ವಿಚಾರವಾದರೆ ಇನ್ನೂ ಈ ಒಂದು ದಾಳಿಯಲ್ಲಿ ವಿಶೇಷವಾಗಿ ಕಂಡು ಬಂದಿದ್ದು ಸರ್ಕಾರಿ ಕಾಲೇಜಿನ ಉಪನ್ಯಾಸಕರೊಬ್ಬರ ಭ್ರಷ್ಟತೆ.ಎಸ್ ಮೈಸೂರು ಜಿಲ್ಲೆಯ ನಂಜನ ಗೂಡು ಸರ್ಕಾರಿ ಪದವಿ ಕಾಲೇಜಿನ ಅರ್ಥಶಾಸ್ತ್ರ ಪ್ರಾಧ್ಯಾಪಕ ಮಹದೇವಸ್ವಾಮಿ ಅವರ ಮೈಸೂರಿನ ನಿವಾಸ ಸೇರಿಂದಂತೆ 12 ಸ್ಥಳಗಳಲ್ಲಿ ಲೋಕಾಯುಕ್ತ ಪೊಲೀಸರು ತಂಡ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.ಜೆ.ಪಿ ನಗರದ ಮಹ ದೇವಪುರದಲ್ಲಿರುವ ಮನೆ ಹಾಗೂ ನಂಜನ ಗೂಡು,ವಿಜಯನಗರ,ಜೆ.ಪಿ ನಗರ,ಕೃಷ್ಣರಾಜ ನಗರದಲ್ಲಿರುವ ಒಟ್ಟು ಐದು ಸ್ಟೀಲ್ ಅಂಗಡಿ,
ಮಹದೇವಸ್ವಾಮಿ ಶಿಕ್ಷಣ ಸಂಸ್ಥೆ,ಜೆಪಿ ನಗರ ದಲ್ಲಿರುವ ಬಟ್ಟೆ ಅಂಗಡಿಗೆ ದಾಳಿ ನಡೆಸಿದ್ದಾರೆ. ಮಹಾದೇವಸ್ವಾಮಿ ಮನೆ ಹಾಗೂ ಅವರಿಗೆ ಸಂಬಂಧಿಸಿದ ಆಸ್ತಿಯ ಬಗ್ಗೆ ಪರಿಶೀಲನೆ ಮುಂದುವರೆದಿದೆ.ಲೋಕಾಯುಕ್ತ ದಾಳಿಗೆ ಒಳಗಾದ ನಂಜನಗೂಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಮಹದೇವಸ್ವಾ ಮಿಯ ಕೋಟಿ ಕೋಟಿ ಕಥೆಯನ್ನು ನೋಡಿ ಲೋಕಾಯುಕ್ತ ಅಧಿಕಾರಿಗಳು ಪೊಲೀಸರು ಕಂಗಾಲಾಗಿದ್ದು ಕಂಡು ಬಂದಿತು.
ಮಹದೇವಸ್ವಾಮಿ ಎಂ.ಎಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಾಮಾನ್ಯ ಉಪನ್ಯಾಸಕರಾ ಗಿದ್ದು ಇವರಿಗೆ ಸಂಬಂಧಿಸಿದ 12 ಕಡೆಗಳಲ್ಲಿ ದಾಳಿ ಮಾಡಿ 6 ಕೋಟಿ ಮೌಲ್ಯದ ನಿವೇಶನ, ಮನೆ ಹಾಗೂ ಜಮೀನಿಗೆ ಸಂಬಂಧಿಸಿದ ಕಾಗದ ಪತ್ರಗಳು ಪತ್ತೆಯಾಗಿವೆ.2.33 ಕೋಟಿ ಮೌಲ್ಯದ ಚಿನ್ನಾಭರಣ ಸೇರಿದಂತೆ ಒಟ್ಟು 8.41 ಕೋಟಿ ಮೌಲ್ಯದ ಆಸ್ತಿ ಪತ್ತೆಯಾಗಿವೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..