ಕಲಘಟಗಿ ತಾಲೂಕಿನಲ್ಲಿ ನೂತನಾಗಿ ಆಯ್ಕೆಯಾದ ಕಾಂಗ್ರೆಸ್ ಪಕ್ಷದ ಬೆಂಬಲಿತ ಗ್ರಾಮ ಪಂಚಾಯತ ಸದಸ್ಯರಿಗೆ ಅಭಿನಂದನಾ ಸಮಾರಂಭವನ್ನು ಧಾರವಾಡದ ಕಲಘಟಗಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬ್ಲಾಕ್ ಕಾಂಗ್ರೇಸ್ ಸಮಿತಿಯ ಕಲಘಟಗಿ ಅಧ್ಯಕ್ಷ ಮಂಜುನಾಥಗೌಡ ಮುರಳ್ಳಿ ಹೇಳಿದ್ದಾರೆ.

ಕಲಘಟಗಿಯ ಬ್ಲಾಕ್ ಕಾಂಗ್ರೇಸ್ ಸಮಿತಿ ವತಿಯಿಂದ ಈ ಒಂದು ಕಾರ್ಯಕ್ರಮವನ್ನು ಕಲಘಟಗಿಯ ಮಾಜಿ ಸಚಿವ ಸಂತೋಷ್ ಲಾಡ್ ನೇತೃತ್ವದಲ್ಲಿ ಈ ಒಂದು ಸಮಾರಂಭವನ್ನು ಆಯೋಜಿಸಲಾಗಿದೆ. ಅವರ ನಿವಾಸ ಅಮೃತ ನಿವಾಸದಲ್ಲಿ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದರು.ಮಾಜಿ ಸಚಿವರಾದ ಸಂತೋಷ್ ಲಾಡ್ ನೇತೃತ್ವದಲ್ಲಿ ಇಂದು ಈ ಒಂದು ಸಮಾರಂಭ ನಡೆಯಲಿದ್ದು 02:01:2021 ಶನಿವಾರ ರಂದು ಮಧ್ಯಾನ್ಹ 2 ಘಂಟೆಯಿಂದ ಸಾಯಂಕಾಲ 6 ಘಂಟೆಯವರೆಗೆ ನ ನಡೆಯಲಿದೆ ಎಂದರು. ನೂತನ ಗ್ರಾಮ ಪಂಚಾಯತ ಸದಸ್ಯರ ಭೇಟಿ ಹಾಗೂ ಹೊಸ ವರ್ಷದ ಆಚರಣೆಯನ್ನು ಏರ್ಪಡಿಸಲಾಗಿದ್ದು ತಾಲ್ಲೂಕಿನ ಜಿಲ್ಲೆಯ ಕಾಂಗ್ರೇಸ್ ಮುಖಂಡರು ಹಿರಿಯರು ಎಲ್ಲ ಜನಪ್ರತಿನಿದಿಗಳು ಎಲ್ಲ ಮುಂಚೂಣಿ ಘಟಕಗಳ ಪದಾಧಿಕಾರಿಗಳು, ಹಿರಿಯರು, ಜಿ.ಪಂ. ತಾ,ಪಂ. ಪ, ಪಂ .ಗ್ರಾ, ಪಂ. ಸದಸ್ಯರು ಸೇರಿದಂತೆ ಹಲವರು ಪಾಲ್ಗೊಳ್ಳಲಿದ್ದಾರೆ ಎಂದರು.ಇನ್ನೂ ಈ ಒಂದು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಾಜಿ ಸಚಿವ ಸಂತೋಷ್ ಲಾಡ್ ಧಾರವಾಡದ ಕಲಘಟಗಿಗೆ ಆಗಮಿಸಲಿದ್ದಾರೆ.ಕುಟುಂಬ ಸಮೇತ ಪಟ್ಟಣಕ್ಕೆ ಆಗಮಿಸಿ ನಂತರ ತೆರಳಲಿದ್ದಾರೆ.