This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

ಕನ್ನಡ ನಾಮಫಲಕ ಸಂಬಂಧ ಶೀಘ್ರದಲ್ಲೇ ಸುಗ್ರೀವಾಜ್ಞೆ ಸಿದ್ದರಾಮಯ್ಯ – ಫೆಬ್ರುವರಿ 28 ರವರೆಗೆ ನಾಮ ಫಲಕ ಅಳವಡಿಸಲು ಡೆಡ್ ಲೈನ್…..

WhatsApp Group Join Now
Telegram Group Join Now

ಬೆಂಗಳೂರು

ಬೆಂಗಳೂರು

ಕನ್ನಡ ನಾಮಫಲಕ ಸಂಬಂಧ ಶೀಘ್ರದಲ್ಲೇ ಸುಗ್ರೀವಾಜ್ಞೆ ಸಿದ್ದರಾಮಯ್ಯ – ಫೆಬ್ರುವರಿ 28 ರವರೆಗೆ ನಾಮ ಫಲಕ ಅಳವಡಿಸಲು ಡೆಡ್ ಲೈನ್ ಹೌದು ಕನ್ನಡ ನಾಮಫಲಕ ಸಂಬಂಧವಾಗಿ‌ ಕನ್ನಡಪರ ಹೋರಾಟಗಾರರ ಹೋರಾಟ, ಕಾನೂನು ಕೈಗೆತ್ತಿಕೊಳ್ಳುವಿಕೆ, ಬಂಧನ ಕುರಿತಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿ ಮಹತ್ವದ ಘೋಷಣೆ ಮಾಡಿದ್ದಾರೆ.

ಹೋರಾಟಗಾರರ ಉದ್ದೇಶ ನೆರವೇರಿಸುವ ಸುಗ್ರೀವಾಜ್ಞೆ ಹೊರಡಿಸುವ ಭರವಸೆ ನೀಡಿದ್ದಾರೆ. ಅಲ್ಲಿವರೆಗೆ ಎಲ್ಲರೂ ಶಾಂತಿಯುತವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡ. ಬೇಕು ಎಂದು ಮನವಿ ಮಾಡಿ ಈ ಸಂಬಂಧ ಮುಖ್ಯಮಂತ್ರಿ ಹೊರಡಿಸಿರುವ ಪ್ರಕಟಣೆ ಹೀಗಿದೆ

ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್‌ 17 (6) ರ ಪ್ರಕಾರ ಸರ್ಕಾರದ ಅಥವಾ ಸ್ಥಳೀಯ ಪ್ರಾಧಿಕಾರದ ಅನುಮೋದ ನೆಯೊಂದಿಗೆ ನಡೆಸುತ್ತಿರುವ ವಾಣಿಜ್ಯ ಕೈಗಾರಿಕೆ, ವ್ಯಾಪಾರ ಸಂಸ್ಥೆ, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋ ರಂಜನಾ ಕೇಂದ್ರಗಳು ಮತ್ತು ಹೋಟೆಲ್‌ ಮುಂತಾದವುಗಳ ಹೆಸರನ್ನು ಪ್ರದರ್ಶಿಸುವ ಫಲಕಗಳ ಮೇಲಿನ ಅರ್ಧ ಭಾಗವು ಕನ್ನಡದಲ್ಲಿ ಇರತಕ್ಕದ್ದು

ಇದಕ್ಕೂ ಮೊದಲು 2018ರಲ್ಲಿ ಹೊರಡಿಸಿದ ಸುತ್ತೋಲೆಯಲ್ಲಿ ನಾಮಫಲಕದಲ್ಲಿ ಶೇ. 60 ಕನ್ನಡ ಭಾಷೆ ಹಾಗೂ ಶೇ. 40 ರಷ್ಟು ಇತರ ಭಾಷೆ ಯಲ್ಲಿರಬಹುದು ಎಂದು ತಿಳಿಸಲಾಗಿದೆ. ಇದರಂ ತೆಯೇ ಸುಗ್ರೀವಾಜ್ಞೆ ಹೊರಡಿಸಿ, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್‌ 17 (6)ಕ್ಕೆ ತಿದ್ದುಪಡಿ ತಂದು 2024ರ ಫೆಬ್ರವರಿ 28 ರೊಳಗೆ ವಾಣಿಜ್ಯ ಮಳಿಗೆಗಳು ಅನುಷ್ಠಾನ ಗೊಳಿಸಲು ಗಡುವು ನೀಡಲಾಗುವುದು.

ಈ ಕಾಯ್ದೆಯ ನಿಯಮ 17(8) ರಲ್ಲಿ ರಾಜ್ಯದಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾದ ಜಾಹೀರಾತು ಮತ್ತು ಸೂಚನೆಗಳನ್ನು ಪ್ರದರ್ಶಿ ಸುವ ಎಲ್ಲ ಫಲಕಗಳಲ್ಲಿ ವಿಷಯಗಳ ನಿಗದಿತ ಶೇಕಡಾವಾರು ಪ್ರಮಾಣವು ಕನ್ನಡ ಭಾಷೆಯಲ್ಲಿ ಇರತಕ್ಕದ್ದು

ಜಾಹೀರಾತುಗಳ ವರ್ಗೀಕರಣ ಮತ್ತು ಕನ್ನಡ ದಲ್ಲಿ ಪ್ರದರ್ಶಿಸಬೇಕಾದ ಜಾಹೀರಾತು ವಿಷಯ ಗಳ ಶೇಕಡಾವಾರು ಪ್ರಮಾಣವು ರಾಜ್ಯ ಸರ್ಕಾರ ದಿಂದ ನಿಯಮಿಸಲಾದಂತೆ ಇರತಕ್ಕದ್ದು ಎಂದು ತಿಳಿಸಲಾಗಿದೆ. ಇದನ್ನು ಸಹ ಅನುಷ್ಠಾನಗೊಳಿಸ ಲಾಗುವುದು.

ಈ ಕಾಯ್ದೆಯ ಅಧಿಸೂಚನೆ ಹೊರಡಿಸಲು ಹಾಗೂ ನಿಯಮಗಳನ್ನು ರೂಪಿಸಲು ಕೂಡಲೇ ಕ್ರಮ ಕೈಗೊಳ್ಳಲಾಗುವುದು.ಶಾಂತಿಯುತವಾದ ಪ್ರತಿಭಟನೆ ಮಾಡಲು ಸರ್ಕಾರದ ವಿರೋಧ ಇಲ್ಲ. ನಮಗೆ ಪ್ರಜಾಪ್ರಭುತ್ವದಲ್ಲಿ, ಸಂವಿಧಾನ ದಲ್ಲಿ ನಂಬಿಕೆ ಇದೆ.

ಆದರೆ ಕಾನೂನಿಗೆ ವಿರುದ್ಧವಾಗಿ ಯಾರಾದರೂ ನಡೆದುಕೊಂಡರೆ ಅದನ್ನು ಸರ್ಕಾರ ಸಹಿಸುವು ದಿಲ್ಲ ಎಂಬುದನ್ನು ಸ್ಪಷ್ಟವಾಗಿ ಹೇಳ ಬಯಸು  ತ್ತೇನೆ ಎಂದಿದ್ದಾರೆ.3-3-2022ರಲ್ಲಿ ಕರ್ನಾಟಕ ಉಚ್ಛನ್ಯಾಯಾಲಯವು ಪ್ರತಿಭಟನೆಗಳನ್ನು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಮಾತ್ರ ನಡೆಸಬೇಕು,ರಾಜ್ಯ ಸರ್ಕಾರವು ಇದನ್ನು ಖಾತರಿಪಡಿಸಬೇಕು ಎಂದು ಸ್ಪಷ್ಟವಾದ ಆದೇಶ ಹೊರಡಿಸಿದೆ.

ಸಂಘಟನೆಯಿರಲಿ, ವ್ಯಕ್ತಿಗಳಿರಲಿ, ಖಾಸಗಿ ಸಂಸ್ಥೆ ಗಳಿರಲಿ ಯಾರೇ ಆಗಲಿ ಸಂವಿಧಾನಕ್ಕೆ ಅನುಗು ಣವಾಗಿ ನಡೆದುಕೊಳ್ಳಬೇಕು.ಯಾರೂ ಕಾನೂನ ನ್ನು ಕೈಗೆ ತೆಗೆದುಕೊಳ್ಳಬಾರದು.ಕಾನೂನು ಸುವ್ಯ ವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk