ಧಾರವಾಡ –
ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಕೋವಿಡ್ ಮುನ್ನೆಚ್ಚರಿಕೆ ಡೋಸ್ ಲಭ್ಯ DHO ಡಾ.ಪಾಟೀಲ ಶಶಿ ಮಾಹಿತಿ – ಸಾರ್ವಜನಿಕರು ಸದುಪಯೋಗ ಪಡೆಯಲು ಮನವಿ ಹೌದು ಭಾರತ ಸರ್ಕಾರದ ಮಾರ್ಗಸೂಚಿಯಂತೆ ಕಾರ್ಬಿವ್ಯಾಕ್ಸ್ ಲಸಿಕೆ ಯನ್ನು (ಹೆಟಿರೊಲಾಗಸ್) ಮುನ್ನೆಚ್ಚರಿಕೆ ಡೋಸ್ ಆಗಿ ನೀಡಬಹುದಾಗಿದೆ.
ಆದ್ದರಿಂದ ಕೋವಿಶೀಲ್ಡ್ ಅಥವಾ ಕೋವ್ಯಾಕ್ಸಿನ್ ಲಸಿಕೆಯ 2 ನೇ ಡೋಸ್ ಪಡೆದು 6 ತಿಂಗಳು ಗಳು ಅಥವಾ 26 ವಾರಗಳನ್ನು ಪೂರೈಸಿದ 18 ವರ್ಷ ಮೇಲ್ಪಟ್ಟವರು, ಮುನ್ನೆಚ್ಚರಿಕೆ ಡೋಸ್ ಪಡೆಯದ 60 ವರ್ಷ ಮೇಲ್ಪಟ್ಟವರು, ಕಡಿಮೆ ರೋಗ ನಿರೋಧಕ ಶಕ್ತಿ ಇರುವವರು ಮತ್ತು ಆರೋಗ್ಯ ಕಾರ್ಯಕರ್ತರು ಕೊವಿಡ್ ಲಸಿಕಾ ಕರಣದ ಮಾರ್ಗಸೂಚಿಯ ಪ್ರಕಾರ ಮುನ್ನೆಚ್ಚರಿಕೆ ಡೋಸ್ ಪಡೆಯಬಹುದಾಗಿದೆ.
ಧಾರವಾಡದ ಜಿಲ್ಲಾ ಆಸ್ಪತ್ರೆ, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ ಮತ್ತು ಕಲಘಟಗಿ, ಕುಂದಗೋಳ ಹಾಗೂ ನವಲಗುಂದ ತಾಲೂಕಾ ಆಸ್ಪತ್ರೆಗಳಲ್ಲಿ ಕಾರ್ಬಿ ವ್ಯಾಕ್ಸ್ ಲಸಿಕೆ ಲಭ್ಯವಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆಯಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಪಾಟೀಲ ಶಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಧಾರವಾಡ…..