ಬೆಂಗಳೂರು –
ಮತ್ತೊಂದು ಬಜೆಟ್ ಮಂಡನೆ ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿದ್ಧತೆಯನ್ನು ಮಾಡಿಕೊಳ್ಳ ಲಾರಂಭಿಸಿದ್ದಾರೆ.ಹೌದು ಫೆಬ್ರುವರಿ 16 ರಂದು ರಾಜ್ಯ ಬಜೆಟ್ ನ್ನು ಮಂಡನೆ ಮಾಡಲು ಸಿದ್ಧತೆ ಆರಂಭಿಸಿದ್ದಾರೆ ಸಿಎಂ ಸಿದ್ದರಾಮಯ್ಯ ಗ್ಯಾರಂ ಟಿಗಳ ಭಾರದಲ್ಲಿ ಮುಳುಗಿರುವ ರಾಜ್ಯ ಸರ್ಕಾರ ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಮತ್ತೊಂ ದು ಜನಪ್ರಿಯ ಬಜೆಟ್ ನೀಡುತ್ತದೆಯೋ
ಅಥವಾ ವಿತ್ತೀಯ ಶಿಸ್ತಿನ ಅನಿವಾರ್ಯತೆ ಪ್ರದರ್ಶಿಸಲಿದೆಯೋ ಎಂಬ ಕುತೂಹಲಕ್ಕೆ ಫೆಬ್ರವರಿ 16ರಂದು ಎಲ್ಲಾ ಪ್ರಶ್ನೆ ಗಳಿಗೆ ಉತ್ತರ ಲಭಿಸುವ ನಿರೀಕ್ಷೆ ಇದೆ ಈಗಾಗಲೇ ಈ ಒಂದು ಕುರಿತು ಬಜೆಟ್ ಸಿದ್ಧತೆ ಪ್ರಾರಂಭಿಸಲಿದ್ದಾರೆ.ಫೆ. 12ರಿಂದ ರಾಜ್ಯ ವಿಧಾನ ಮಂಡಲದ ಜಂಟಿ ಅಧಿವೇಶನ ಪ್ರಾರಂಭಗೊಳ್ಳಲಿದೆ.
ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಉಭಯ ಸದನವನ್ನುದ್ದೇಶಿಸಿ ಭಾಷಣ ಮಾಡ ಲಿದ್ದಾರೆ. ಬಳಿಕ ನಾಲ್ಕು ದಿನಗಳ ಕಾಲ ವಂದನಾ ನಿರ್ಣಯದ ಬಗ್ಗೆ ಚರ್ಚೆ ನಡೆಯಲಿದೆ ಫೆ.16 ಅಥವಾ 17ರಂದು ಸಿಎಂ ಸಿದ್ದರಾಮಯ್ಯನವರು ತಮ್ಮ 15ನೇ ಆಯವ್ಯಯವನ್ನು ಮಂಡಿಸಲಿ ದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಮೂಲಗ ಳು ತಿಳಿಸಿವೆ.
ಫೆ.12 ರಿಂದ 23 ರವರೆಗೆ ಅಧಿವೇಶನ ನಡೆ ಯುತ್ತದೆ. ಗ್ಯಾರಂಟಿಗಳಿಗೆ ಈ ಬಾರಿಯ ಬಜೆಟ್ ನಲ್ಲಿ ಸುಮಾರು 75000 ಕೋಟಿ ರೂ. ವ್ಯಯವಾ ಗಬಹುದು ಎಂದು ನಿರೀಕ್ಷಿಸಲಾಗುತ್ತಿದೆ. ಹೀಗಾಗಿ ಲೋಕಸಭಾ ಚುನಾವಣೆಯ ಹೊಸ್ತಿಲಲ್ಲಿ ಇನ್ನಷ್ಟು ಜನಪ್ರಿಯ ಯೋಜನೆಗಳನ್ನು ಘೋಷಿ ಸುವುದಕ್ಕೆ ಸಿದ್ದರಾಮಯ್ಯ ಅವರಿಗೆ ಕಷ್ಟವಾಗಬ ಹುದು ಎಂದು ಹೇಳಲಾಗುತ್ತಿದೆ.
ಕಳೆದ ಬಜೆಟ್ ನಲ್ಲಿ ಘೋಷಿಸಿದ ಹಲವು ಯೋಜನೆಗಳು ಆಡ ಳಿತಾತ್ಮಕ ಆದೇಶಕ್ಕೆ ಮಾತ್ರ ಸೀಮಿತವಾಗಿರುವು ದರಿಂದ ಸಿದ್ದರಾಮಯ್ಯನ ವರಿಗೆ ಈ ಬಾರಿಯ ಬಜೆಟ್ ಕೂಡಾ ಹಗ್ಗದ ಮೇಲಿನ ನಡಿಗೆಯಾಗಿ ಪರಿಣಮಿಸಿದೆ.2023-24ನೇ ಸಾಲಿನಲ್ಲಿ 2,50,933 ಕೋಟಿ ರೂ. ರಾಜಸ್ವ ವೆಚ್ಚ, 54,374 ಕೋಟಿ ರೂ. ಬಂಡವಾಳ ವೆಚ್ಚ,
22,441 ಕೋಟಿ ರೂ. ಸಾಲದ ಮರುಪಾವತಿ ಯೂ ಒಳಗೊಂಡಂತೆ 3,27,747 ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಲಾಗಿತ್ತು. ಈ ಬಾರಿ ಬಜೆಟ್ ಗಾತ್ರ ಮೂರೂವರೆ ಲಕ್ಷ ಕೋಟಿ ರೂ.ಗೆ ತಲುಪಬಹುದು ಎಂದು ಅಂದಾಜಿಸಲಾಗುತ್ತಿದ್ದು ಏನೇನಾಗಲಿದೆ ಎಂಬೊಂದನ್ನು ಕಾದು ನೋಡಬೇಕಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..