ಬೆಂಗಳೂರು –
ರಾಜ್ಯದ ಶಿಕ್ಷಕರ ಸಮಸ್ಯೆ ಗಳು ಮತ್ತು ಹೊಸ ಪಿಂಚಣಿ ಯೋಜನೆ ರದ್ದು ಮಾಡಿ ಹಳೆ ಪಿಂಚಣಿ ಯೋಜನೆ ಮರು ಜಾರಿಗೆ ತರುವ ವಿಚಾರ ಕುರಿತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಯೋಗವು ಭೇಟಿ ಮಾಡಿ ಚರ್ಚೆಯನ್ನು ಮಾಡಿದರು
ಹೌದು ಬೆಂಗಳೂರಿನಲ್ಲಿ ಗೃಹ ಕಚೇರಿ ಯಲ್ಲಿ ಸಂಘಟನೆ ಯ ರಾಜ್ಯಾಧ್ಯಕ್ಷ ಕೆ ನಾಗೇಶ್ ಮತ್ತು ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ಅವರ ನೇತೃತ್ವದಲ್ಲಿನ ನಿಯೋಗವು ಡಿಕೆಶಿ ಅವರನ್ನು ಭೇಟಿ ಯಾಗಿ ಪ್ರಮುಖವಾಗಿ ಶಿಕ್ಷಕರ ಸಮಸ್ಯೆ ಸೇರಿದಂತೆ ಹೊಸ ಪಿಂಚಣಿ ಯೋಜನೆ ರದ್ದು ಮಾಡಿ ಹಳೆ ಪಿಂಚಣಿ ಯೋಜನೆ ಯನ್ನು ಮರು ಜಾರಿಗೆ ತರುವ ಕುರಿತು ಚರ್ಚೆ ನಡೆಸಿದರು
ರಾಜ್ಯದ ಈ ಒಂದು ನಿಯೋಗಕ್ಕೆ ಉಪ ಮುಖ್ಯಮಂತ್ರಿ ಡಿಕೆಶಿ ಯವರು ಸ್ಪಂದಿಸಿ ಸಚಿವ ಸಂಪುಟದ ಸಭೆಯಲ್ಲಿ ಸೂಕ್ತವಾದ ತೀರ್ಮಾನ ತೆಗೆದುಕೊಳ್ಳುವ ಭರವಸೆ ನೀಡಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..