ಕೊಡಗು –
ಈ ಕೂಡಲೇ 7 ನೇ ವೇತನ ಆಯೋಗ ದ ವರದಿ ಪಡೆದು ಜಾರಿ ಮಾಡಿ -ಬೇಡಿಕೆ ಗಳ ಈಡೇರಿಕೆಗೆ ಮನವಿ ಸಲ್ಲಿಸಿದ ಸರ್ಕಾರಿ ನೌಕರರ ನಿಯೋಗ – ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದಿಂದ ಎ. ಎಸ್ ಪೊನ್ನಣ್ಣ ಭೇಟಿ ಮನವಿ ಸಲಿಕೆ ಹೌದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ವಿರಾಜಪೇಟೆ ತಾಲ್ಲೂಕು ಶಾಖೆಯ ಅಧ್ಯಕ್ಷರಾದ ಗುರುರಾಜ್.ಬಿ.ಎಸ್ ಹಾಗೂ ಜಿಲ್ಲಾಧ್ಯಕ್ಷರಾದ ಪೊನ್ನಚ್ಚನ ಶ್ರೀನಿವಾಸ್ ಇವರುಗಳ ಜಂಟಿ ನೇತೃತ್ವದಲ್ಲಿ
ಶಾಸಕರಾದ ಎ. ಎಸ್.ಪೊನ್ನಣ್ಣ,ನವರನ್ನು ವಿವಿಧ ವೃಂದ ಸಂಘಗಳ ಪದಾಧಿಕಾರಿಗಳು ಹಾಗೂ ಸರಕಾರಿ ನೌಕರರೊಂದಿಗೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮನವಿ ಸಲ್ಲಿಸಿದರು ಹೌದು ಏಳನೇ ವೇತನ ಆಯೋಗದಿಂದ ವರದಿ ಪಡೆದು ಪರಿಷ್ಕೃತ ವೇತನ ಭತ್ಯಗಳನ್ನು ಜಾರಿಗೊಳಿಸು ವುದು.
ಸರಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ಜಾರಿ. ಸರಕಾರಿ ನೌಕರರಿಗೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನ ಸೇರಿದಂತೆ ಕೆಲವು ಬೇಡಿಕೆಗಳನ್ನು ಮುಂದಿಟ್ಟುವಿರಾಜಪೇಟೆ ತಾಲ್ಲೂಕಿನ ಸಮಸ್ತ ಸರ್ಕಾರಿ ನೌಕರರ ಪರವಾಗಿ ಮುಖ್ಯಮಂತ್ರಿಗಳಿಗೆ ಒತ್ತಡ ತರಲು ಮನವಿ ಮಾಡಲಾಯಿತು.
ಕರ್ನಾಟಕ ಸರ್ಕಾರಿ ನೌಕರರ ಸಂಘ, ಕೊಡಗು ಜಿಲ್ಲಾ ಶಾಖೆಯ ಜಿಲ್ಲಾಧ್ಯಕ್ಷರು ಹಾಗೂ ಪದಾಧಿ ಕಾರಿಗಳು. ರಾಜ್ಯ ಪರಿಷತ್ನ ಅಧ್ಯಕ್ಷರು ಕಾರ್ಯ ದರ್ಶಿ ಖಜಾಂಚಿ, ಪದಾಧಿಕಾರಿಗಳು ಮತ್ತು ಸದಸ್ಯರು ಸರಕಾರಿ,ಅನುದಾನಿತ ವಿವಿಧ ಇಲಾಖೆ ಗಳ ವೃಂದ ಸಂಘಗಳ ಅಧ್ಯಕ್ಷರು, ಕಾರ್ಯದರ್ಶಿ ಮತ್ತು ಪದಾಧಿಕಾರಿಗಳು ತಾಲ್ಲೂಕಿನ ಸರ್ಕಾರಿ ನೌಕರರು ಭಾಗವಹಿಸಿದ್ದರು.
ಸುದ್ದಿ ಸಂತೆ ನ್ಯೂಸ್ ಕೊಡಗು…..