ಬೆಂಗಳೂರು –
ಪ್ರಕಟಗೊಂಡಿತು ರಾಜ್ಯದ ಮತದಾರರ ಪಟ್ಟಿ ಏನಾದರೂ ಬದಲಾವಣೆ ತಿದ್ದುಪಡಿ ಗಳಿದ್ದರೆ ಅರ್ಜಿ ಸಲ್ಲಿಸಲು ನೀಡಿತು ಅವಕಾಶ ಹೌದು ಕರ್ನಾಟಕ ಚುನಾವಣಾ ಆಯೋಗವು ರಾಜ್ಯದ 224 ಕ್ಷೇತ್ರಗಳ ಮತದಾರರ ಪಟ್ಟಿ ಪ್ರಕಟಿಸಿದೆ.
ಬದಲಾವಣೆ, ತಿದ್ದುಪಡಿ ಇದ್ದರೆ ಫಾರ್ಮ್ 8 ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ.
ಇಂದಿನಿಂದ ನಾಮಪತ್ರ ಸಲ್ಲಿಕೆಯ ಕೊನೆಯ ದಿನಾಂಕದ ಮುಂಚಿತ 10 ದಿನದ ಒಳಗಾಗಿ ಅರ್ಜಿ ಸಲ್ಲಿಸಬಹುದು.
ಅಂತಿಮ ಪಟ್ಟಿಯಲ್ಲಿ ಈಗ 5,37,85,815 ಮತದಾರರು ಇದ್ದಾರೆ. ಇದರಲ್ಲಿ 2,69,33,750 ಪುರುಷರು, 2,68,47,145 ಮಹಿಳೆಯರು ಇದ್ದಾರೆ ಎಂದು ಕರ್ನಾಟಕ ಮುಖ್ಯ ಚುನಾವ ಣಾಧಿಕಾರಿ ಮನೋಜ್ ಕುಮಾರ್ ಮೀನಾ ಮಾಹಿತಿ ನೀಡಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..