ಧಾರವಾಡ –
ಪೊಲೀಸ್ ಪರೀಕ್ಷೆ ಯಲ್ಲಿ ವಸ್ತ್ರಸಂಹಿತೆ ಪಾಲಿಸಲು ಧಾರವಾಡ SP ಸೂಚನೆ – ಪರೀಕ್ಷೆ ಗೆ ಎಲ್ಲಾ ಸಿದ್ದತೆ ಗಳನ್ನು ಮಾಡಿಕೊಂಡು ಬರುವಂತೆ ಅಭ್ಯರ್ಥಿಗಳಿಗೆ ಕರೆ ನೀಡಿದ SP ಗೋಪಾಲ ಬ್ಯಾಕೋಡ ಹೌದು ಜನವರಿ 28 ರಂದು ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಲಿಖಿತ ಪರೀಕ್ಷೆ ನಿರ್ಧಿಷ್ಟ ವಸ್ತು ಸಂಹಿತೆ ಪಾಲಿಸಲು ಪೊಲೀಸ್ ಇಲಾಖೆ ಸೂಚನೆ
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಸಿಎಆರ್ ಮತ್ತು ಡಿಎಆರ್ ವಿಭಾಗದ ಪುರುಷ ಮತ್ತು ತೃತೀಯ ಲಿಂಗ ಪುರುಷ 3,064 ಹುದ್ದೆ ಗಳಿಗೆ ಲಿಖಿತ ಪರೀಕ್ಷೆಯನ್ನು ಜನವರಿ 28 ರಂದು ಬೆಳಿಗ್ಗೆ 11 ರಿಂದ 12:30 ಗಂಟೆಯವರೆಗೆ ರಾಜ್ಯಾದ್ಯಂತ ನಡೆಸಲಾಗುವುದು.
ಲಿಖಿತ ಪರೀಕ್ಷೆಗೆ ಅರ್ಹರಿರುವ ಅಭ್ಯರ್ಥಿಗಳಿಗೆ ಪ್ರವೇಶ ಪತ್ರದ ಬಗ್ಗೆ ಎಸ್.ಎಂ.ಎಸ್ ಮೂಲಕ ಮಾಹಿತಿಯನ್ನು ಮತ್ತು ಪ್ರವೇಶ ಪತ್ರದ ಲಿಂಕ್ ಅನ್ನು ಕಳುಹಿಸಲಾಗುವುದು. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‍ಲೋಡ್ ಮಾಡಿ ಕೊಂಡು ನಿಗದಿಪಡಿಸಿದ ದಿನಾಂಕದಂದು ಲಿಖಿತ ಪರೀಕ್ಷೆಗೆ ಹಾಜರಾಗಬೇಕು.
ವಸ್ತ್ರ ಸಂಹಿತೆ ಪುರುಷ ಮತ್ತು ತೃತಿಯಲಿಂಗ ಪುರುಷ ಅಭ್ಯರ್ಥಿಗಳು ಕಡ್ಡಾಯವಾಗಿ ಅರ್ಧ ತೋಳಿನ ಶರ್ಟ್‍ಗಳನ್ನು ಧರಿಸಬೇಕು ಹಾಗೂ ಸಾಧ್ಯವಾದಷ್ಟು ಕಾಲರ್ ರಹಿತ ಶರ್ಟ್‍ಗಳನ್ನು ಧರಿಸುವುದು, ಜಿಪ್ ಪ್ಯಾಕೆಟಗಳು, ದೊಡ್ಡ ಬಟನ್‍ಗಳು ಇರುವ ಶರ್ಟ್‍ಗಳನ್ನು ಧರಿಸ. ತಕ್ಕದ್ದಲ್ಲ. ಜೀನ್ಸ್ ಪ್ಯಾಂಟ್ ಮತ್ತು ಹೆಚ್ಚಿನ ಜೇಬುಗಳಿರುವ ಪ್ಯಾಂಟಗಳನ್ನು ಧರಿಸತಕ್ಕದ್ದಲ್ಲ.
ಪರೀಕ್ಷಾ ಕೇಂದ್ರದೊಳಗೆ ಷೂಗಳನ್ನು ನಿಷೇಧಿಸಲಾಗಿದೆ ಅಭ್ಯರ್ಥಿಗಳು ತೆಳುವಾದ ಅಡಿಭಾಗವಿರುವ ಪಾದರಕ್ಷೆಗಳನ್ನು (ಚಪ್ಪಲಿ) ಧರಿಸಬೇಕು. ಕುತ್ತಿಗೆ ಸುತ್ತಾ ಯಾವುದೇ ಲೋಹದ ಆಭರಣಗಳನ್ನು ಅಥವಾ ಉಂಗುರ ಮತ್ತು ಕಡಗಗಳನ್ನು ಧರಿಸುವುದನ್ನು ನಿಷೇಧಿಸ ಲಾಗಿದೆ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಗೋಪಾಲ ಎಂ.ಬ್ಯಾಕೋಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಧಾರವಾಡ…..