ಬೆಂಗಳೂರು –
ಲೋಕಸಭಾ ಚುನಾವಣೆ ಯ ಕಾರ್ಯ ಚಟುವಟಿಕೆ ಗಳು ಚುರುಕುಗೊಂಡಿದ್ದು ಕರ್ನಾಟಕ ಸೇರಿ 23 ರಾಜ್ಯಗಳಿಗೆ ಚುನಾವಣಾ ಉಸ್ತುವಾರಿ ಗಳನ್ನು ಬಿಜೆಪಿ ಹೈ ಕಮಾಂಡ್ ನೇಮಿಸಿದೆ
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಚುನಾವಣಾ ಉಸ್ತುವಾರಿಗಳು ಮತ್ತು ಸಹ-ಉಸ್ತುವಾರಿಗಳನ್ನು ನೇಮಿಸಿದೆ.ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಮುಂದಿನ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ
ಕರ್ನಾಟಕ ರಾಜ್ಯದ ಚುನಾವಣಾ ಉಸ್ತುವಾರಿ ಯಾಗಿ ರಾಧಾಮೋಹನ್ ದಾಸ್ ಅಗರ್ವಾಲ್ ಹಾಗೂ ಸಹ ಉಸ್ತುವಾರಿಯಾಗಿ ಸುಧಾಕರ್ ರೆಡ್ಡಿ ಅವರನ್ನು ನಿಯುಕ್ತಿಗೊಳಿಸಿ ಆದೇಶ ಹೊರಡಿಸಿ ದ್ದಾರೆ. ಬೈಜಯಂತ್ ಪಾಂಡಾ ಅವರನ್ನು ಉತ್ತರ ಪ್ರದೇಶದ ನೂತನ ಉಸ್ತುವಾರಿಯಾಗಿ ನೇಮಿ ಸಲಾಗಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..