ಬಾಗಲಕೋಟೆ –
ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿಗಳ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಣೆ ಮಕ್ಕಳ ಸಾವಿಗೆ ಸಂತಾಪ ಸೂಚಿಸಿದ ನಾಡದೊರೆ ಸಿದ್ದರಾಮಯ್ಯ ಹೌದು ಜಮಖಂಡಿ ತಾಲೂಕಿನ ಆಲಗೂರು ಸಮೀಪದಲ್ಲಿ ಶಾಲಾ ಬಸ್ ಹಾಗೂ ಟ್ರ್ಯಾಕ್ಟರ್ ಮಧ್ಯೆ ಅಪಘಾತ ಸಂಭವಿಸಿ ಮೃತ ಪಟ್ಟ ನಾಲ್ವರು ವಿದ್ಯಾರ್ಥಿ ಗಳಿಗೆ ಮುಖ್ಯಮಂತ್ರಿ ಪರಿಹಾರ ಘೋಷಣೆ ಮಾಡಿದ್ದಾರೆ.
ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದುಃಖ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಮೃತ ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ ಎರಡು ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ.ಈ ಬಗ್ಗೆ ಸಿದ್ದರಾಮಯ್ಯ ಅವರು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಆಲಗೂರು ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಶಾಲಾ ಮಕ್ಕಳು ಸಾವಿಗೀಡಾದ ಸುದ್ದಿ ತಿಳಿದು ಅತೀವ ದುಃಖ ವಾಯಿತು.ಬದುಕಿ ಬಾಳಬೇಕಿದ್ದ ಚಿಕ್ಕ ಮಕ್ಕಳು ಹೀಗೆ ಅಕಾಲಿಕ ಮರಣಕ್ಕೆ ಈಡಾದುದ್ದು ಘೋರ ಅನ್ಯಾಯ.
ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..