ಬೆಂಗಳೂರು –
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆ NDA ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ರಂಗನಾಥ್ – ರಂಗನಾಥ್ ಅವರಿಗೆ ಸಾಥ್ ನೀಡಿದ ಹಲವು ನಾಯಕರು ಹೌದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಗೆ NDA ಅಭ್ಯರ್ಥಿಯಾಗಿ ಎ ಪಿ ರಂಗನಾಥ್ ನಾಮ ಪತ್ರವನ್ನು ಸಲ್ಲಿಸಿದರು.ಹೌದು ವಿಧಾನ ಪರಿಷತ್ʼಗೆ ನಡೆಯಲಿರುವ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯ ಜೆಡಿಎಸ್-ಬಿಜೆಪಿ ಮೈತ್ರಿ (NDA) ಅಭ್ಯರ್ಥಿಯಾದ ಎ.ಪಿ. ರಂಗ ನಾಥ್ ಅವರು ಇಂದು ಚುನಾವಣಾಧಿಕಾರಿಗಳು ಹಾಗೂ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿ ಹಿರಿಯ ನಾಯಕರು ಹಾಗೂ ಮಾಜಿ ಉಪ ಮುಖ್ಯಮಂತ್ರಿಗಳಾದ ಡಾ.ಸಿ ಎನ್. ಅಶ್ವತ್ಥನಾರಾಯಣ ಬಿಜೆಪಿ ಕೋರ್ ಕಮಿಟಿ ಅಧ್ಯಕ್ಷರಾದ ಜಿ.ಟಿ ದೇವೇಗೌಡರು ಈ ಒಂದು ಸಮಯದಲ್ಲಿ ಉಪಸ್ಥಿತರಿದ್ದರು.
ವಿಧಾನ ಪರಿಷತ್ ಸದಸ್ಯರಾದ ಟಿ.ಎ.ಶರವಣ, ಮಾಜಿ ಸದಸ್ಯರಾದ ಚೌಡರೆಡ್ಡಿ ತೂಪಲ್ಲಿ, ಜೆಡಿಎಸ್ ನಗರ ಘಟಕದ ಅಧ್ಯಕ್ಷರಾದ ಹೆಚ್. ಎಂ.ರಮೇಶ್ ಗೌಡರು ಮಾಜಿ ಮುಖ್ಯಮಂತ್ರಿ ಅವರ ಜೊತೆಯಲ್ಲಿ ಇದ್ದರು.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..