ಹುಬ್ಬಳ್ಳಿ –
ಹುಬ್ಬಳ್ಳಿಯಲ್ಲಿ ಯಶಸ್ವಿಯಾಗಿ ನಡೆಯಿತು ಗ್ಯಾರಂಟಿ ಸಮಾವೇಶ – ಜಿಲ್ಲಾಡಳಿತ ಮಹಾ ನಗರ ಪಾಲಿಕೆಯಿಂದ ಕಾರ್ಯಕ್ರಮ ಆಯೋಜನೆ…..ಸಚಿವ ಸಂತೋಷ್ ಲಾಡ್ ಗೆ ಸಾಥ್ ನೀಡಿ ಶಾಸಕ ಪ್ರಸಾದ್ ಅಬ್ಬಯ್ಯ ಮತ್ತು ಅಧಿಕಾರಿಗಳು ಹೌದು
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತಂತೆ ಹುಬ್ಬಳ್ಳಿಯಲ್ಲಿ ಗ್ಯಾರಂಟಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು.ನಗರದ ರೇಲ್ವೆ ಮೈದಾನದಲ್ಲಿ ಜಿಲ್ಲಾಡಳಿತ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಿಂದ ಹಮ್ಮಿ ಕೊಂಡಿದ್ದ ಈ ಒಂದು ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಶಾಸಕ ಪ್ರಸಾದ್ ಅಬ್ಬಯ್ಯ ಚಾಲನೆ ನೀಡಿದರು.
ಸಸಿ ಗೆ ನೀರು ಹಾಕುವ ಮೂಲಕ ಈ ಒಂದು ಸಮಾವೇಶಕ್ಕೆ ಚಾಲನೆ ನೀಡಿದರು.ರಾಜ್ಯದ ತುಂಬೆಲ್ಲಾ ಈ ಒಂದು ಕಾರ್ಯಕ್ರಮವನ್ನು ಮಾಡಲಾಗುತ್ತಿದ್ದು ಈ ಒಂದು ಹಿನ್ನಲೆಯಲ್ಲಿ ಧಾರವಾಡ ಜಿಲ್ಲೆಯಲ್ಲೂ ಕೂಡಾ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಾರ್ಯಕ್ರಮವನ್ನು ಮಾಡಲಾಗುತ್ತಿದ್ದು
ಮೊದಲ ಕಾರ್ಯಕ್ರಮವಾಗಿ ಹುಬ್ಬಳ್ಳಿಯಲ್ಲಿ ರಾಜ್ಯ ಸರ್ಕಾರದ ಗ್ಯಾರಂಟಿ ಸಮಾವೇಶ ನಡೆಯಿತು.ಹುಬ್ಬಳ್ಳಿಯ ರೈಲ್ವೇ ಮೈದಾನದಲ್ಲಿ ಗ್ಯಾರಂಟಿ ಸಮಾವೇಶ ಕಾರ್ಯಕ್ರಮ ನಡೆಯಿತು ಧಾರವಾಡ ಜಿಲ್ಲಾಡಳಿತ ಹಾಗೂ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಿಂದ ಈ ಒಂದು ಗ್ಯಾರಂಟಿ ಸಮಾವೇಶ ಆಯೋಜನೆ ಮಾಡಲಾಗಿತ್ತು
ಪ್ರಮುಖವಾಗಿ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ ಸಮಾವೇಶ ಕುರಿತಂತೆ ಹು-ಧಾ ಪೂರ್ವ ಕ್ಷೇತ್ರ ಹಾಗೂ ಸೆಂಟ್ರಲ್ ಕ್ಷೇತ್ರ ಗಳ ಸರ್ಕಾರದ ಗ್ಯಾರಂಟಿಗಳನ್ನು ಸಮರ್ಪಕ ಅನುಷ್ಠಾನಗೊಳಿಸುವ ಹಿನ್ನೆಲೆ ಸಮಾವೇಶ ಆಯೋಜನೆ ಮಾಡಲಾಗಿತ್ತು.ಗ್ಯಾರಂಟಿ ಸಮಾವೇಶವನ್ನು ಸಚಿವ ಸಂತೋಷ ಲಾಡ್ ಹಾಗೂ ಶಾಸಕ ಪ್ರಸಾದ್ ಅಬ್ಬಯ್ಯ ಚಾಲನೆ ನೀಡಿದರು.
ಹು-ಧಾ ಪೂರ್ವ ಕ್ಷೇತ್ರ ಹಾಗೂ ಹು-ಧಾ ಸೆಂಟ್ರಲ್ ಕ್ಷೇತ್ರಗಳ ಗ್ಯಾರಂಟಿಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಸಮಾ ವೇಶವನ್ನು ಮಾಡಲಾಯಿತು ಸಮಾವೇಶದಲ್ಲಿ ಮಹಾನಗರ ಪಾಲಿಕೆಯ ಆಯುಕ್ತರಾದ ಡಾ ಈಶ್ವರ ಉಳ್ಳಾಗಡ್ಡಿ,ಜಿಲ್ಲಾಧಿಕಾರಿ ದಿವ್ಯಪ್ರಭ, ಸೇರಿದಂತೆ ಪಾಲಿಕೆಯ ಸದಸ್ಯರು ವಿವಿಧ ವಿಭಾಗಗಳ ಅಧಿಕಾರಿಗಳು ಸೇರಿದಂತೆ ವಿವಿಧ ಭಾಗಗಳ ನೂರಾರು ಸಂಖ್ಯೆಯ ಸಾರ್ವಜನಿಕರು ಪಾಲ್ಗೊಂಡು ಕಾರ್ಯಕ್ರಮವನ್ನು ಯಸಸ್ವಿ ಗೊಳಿಸಿದರು.
ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ…..