ಬೆಂಗಳೂರು –
ಸರ್ಕಾರಿ ನೌಕರರ ಮಹಾ ಸಮ್ಮೇಳನ ಕುರಿತಂತೆ ರಾಜ್ಯಾಧ್ಯಕ್ಷರಿಂದ ಒಂದಿಷ್ಟು ಮಾಹಿತಿ – ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಿಂದ ಕಾರ್ಯಕ್ರಮ ಕುರಿತಂತೆ ಕಂಪ್ಲೀಟ್ ಮಾಹಿತಿ
ರಾಜ್ಯದ ಸರ್ಕಾರಿ ನೌಕರರ ಮಹಾ ಸಮ್ಮೇಳನ ಫೆಬ್ರುವರಿ 27 ನಡೆಯಲಿದೆ.ಈ ಒಂದು ಐತಿಹಾ ಸಿಕ ಕಾರ್ಯಕ್ರಮವು ಅರಮನೆ ಮೈದಾನದಲ್ಲಿ ನಡೆಯಲಿದ್ದು ಮಹಾ ಸಮ್ಮೇಳನಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸೇರಿದಂತೆ ರಾಜ್ಯ ಸರ್ಕಾರದ ಸಚಿವರು ಗಣ್ಯರು ಪಾಲ್ಗೊಳ್ಳಲಿದ್ದು ರಾಜ್ಯದ ಮೂಲೆ ಮೂಲೆಗಳಿಂದ ನೌಕರರು ಕೂಡಾ ಆಗಮಿಸುವಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ ಎಸ್ ಷಡಾಕ್ಷರಿ ಯವರು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಬೆಂಗಳೂರಿನಲ್ಲಿ ಫೆಬ್ರವರಿ 27ರಂದು ನಡೆಯಲಿದೆ.ಈ ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ.ಸಚಿವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆಂದರು. ಬೆಳಗ್ಗೆ 10.30ಕ್ಕೆ ಅರಮನೆ ಮೈದಾನದ ಕೃಷ್ಣ ವಿಹಾರದಲ್ಲಿ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ನಡೆಯಲಿದೆ.ಸಿ. ಎಸ್. ಷಡಾಕ್ಷರಿ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ
ನೌಕರರಿಗೆ ಆಶಯ ನುಡಿ ಹಾಗೂ ಅಭಿನಂದನೆ ಯನ್ನು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕು ಮಾರ್ ತಿಳಿಸಲಿದ್ದಾರೆ.ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನದಲ್ಲಿ ಸಚಿವರಾದ ಡಾ. ಜಿ. ಪರಮೇಶ್ವರ, ಎಚ್. ಕೆ. ಪಾಟೀಲ, ಸತೀಶ ಜಾರಕಿಹೊಳಿ, ಎಂ. ಬಿ. ಪಾಟೀಲ, ದಿನೇಶ್ ಗುಂಡೂರಾವ್, ಡಾ. ಹೆಚ್. ಸಿ. ಮಹದೇವಪ್ಪ, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಮಧು ಬಂಗಾರಪ್ಪ, ಕೆ. ಎನ್. ರಾಜಣ್ಣ, ಕೆ. ಎಚ್. ಮುನಿಯಪ್ಪ, ಬೈರತಿ ಸುರೇಶ್ ಮುಂತಾದವರು ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿಯನ್ನು ನೀಡಿದರು.
ಇನ್ನೂ ಪ್ರಮುಖವಾಗಿ 7ನೇ ವೇತನ ಆಯೋಗ ಮತ್ತು OPS ಯೋಜನೆ ಜಾರಿ ಸೇರಿದಂತೆ ನೌಕರರ ಕೆಲವೊಂದಿಷ್ಟು ಬೇಡಿಕೆಗಳ ಕುರಿತಂತೆ ಈಗಾಗಲೇ ರಾಜ್ಯ ಸರ್ಕಾರದ ಗಮನಕ್ಕೆ ತರಲಾ ಗಿದೆ.ನೌಕರರ ಗೊಂದಲಗಳು ರಾಜ್ಯದ ಸರ್ಕಾರಿ ನೌಕರರು ಸರ್ಕಾರದ ಮುಂದೆ ಹಲವು ಬೇಡಿಕೆ ಗಳನ್ನು ಇಟ್ಟಿದ್ದೇವೆ.
ಕಾಂಗ್ರೆಸ್ ಸಹ ಚುನಾವಣಾ ಸಮಯದಲ್ಲಿ ನೌಕರರಿಗೆ ಹಲವು ಭರವಸೆಗಳನ್ನು ನೀಡಿತ್ತು. ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಭರವಸೆಗಳ ಈಡೇರಿಕೆ ಬಗ್ಗೆ ಯಾವ ಘೋಷಣೆ ಮಾಡಬ ಹುದು ಎಂಬ ಕುತೂಹಲವಿದೆ.ಹಳೆ ಪಿಂಚಣಿ ಯೋಜನೆ ಅಧಿಕೃತ ಆದೇಶ ಕುರಿತಂತೆ ಕಾಯ ಲಾಗುತ್ತಿದೆ.
ರಾಜ್ಯದ 7ನೇ ವೇತನ ಆಯೋಗದಿಂದ ಶೀಘ್ರ ವರದಿ ಪಡೆದು ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳನ್ನು ಪೂರ್ಣ ಪ್ರಮಾಣದಲ್ಲಿ ಪರಿಷ್ಕರಿಸಿ ಆದೇಶ ಹೊರಡಿಸುವುದು. ಸರ್ಕಾರವು ರಾಜ್ಯದ 7ನೇ ವೇತನ ಆಯೋಗದಿಂದ ಶೀಘ್ರವಾಗಿ ವರದಿ ಯನ್ನು ಪಡೆದು ಸರ್ಕಾರ ಈಗಾಗಲೇ ನೀಡಿರುವ ಶೇಕಡ 17ರಷ್ಟು ಮಧ್ಯಂತರ ಪರಿಹಾರ ಭತ್ಯೆಯು ಸೇರಿದಂತೆ 40ರಷ್ಟು ಫಿಟ್ ಮೆಂಟ್ ಸೌಲಭ್ಯ ವನ್ನು ರಾಜ್ಯ ಸರ್ಕಾರಿ ನೌಕರರು ಹಾಗೂ ಸರ್ಕಾರದ ಅಧೀನಕ್ಕೊಳಪಡುವ ನೌಕರರಿಗೆ
ದಿನಾಂಕ 1/7/2022 ರಿಂದ ಜಾರಿಗೆ ಬರುವಂತೆ ಸರ್ಕಾರಿ ಆದೇಶ ಹೊರಡಿಸುವುದು ಎಂಬುದು ಪ್ರಮುಖ ಬೇಡಿಕೆಯಾಗಿದೆ.ದಿನಾಂಕ 1/4/2006 ಕ್ಕಿಂತ ಮೊದಲು ಜಾರಿಯಲ್ಲಿದ್ದ ಹಳೆಯ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸುವುದು. ರಾಜ್ಯದ ಎನ್‌ಪಿಎಸ್ ನೌಕರರ ಜೀವನ ನಿರ್ವಹಣೆ ಹಾಗೂ ಸಂಧ್ಯಾಕಾಲದ ಬದುಕು ಅತ್ಯಂತ ಕಷ್ಟಕರವಾಗಿರುವುದರಿಂದ
ಎನ್‌ಪಿಎಸ್ ನೌಕರರನ್ನು ಓಪಿಎಸ್ ವ್ಯಾಪ್ತಿಗೆ ತರುವುದು ಸರ್ಕಾರದ ಜವಾಬ್ದಾರಿಯಾಗಿರುತ್ತದೆ. ಈಗಾಗಲೇ ಪಂಜಾಬ್, ರಾಜಸ್ಥಾನ, ಛತ್ತೀಸ್‌ಗಢ್ ಜಾರ್ಖಂಡ್ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿರುವಂತೆ ಹಾಗೂ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಕರ್ನಾಟಕ ರಾಜ್ಯದಲ್ಲೂ ಸಹ
ಎನ್‌ಪಿಎಸ್ ಯೋಜನೆಯನ್ನು ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸು ವುದು ಎಂಬುದು ಸಹ ಪ್ರಮುಖ ಬೇಡಿಕೆಯಾ ಗಿದೆ ಕರ್ನಾಟಕ ರಾಜ್ಯ ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನಗೊಳಿಸುವುದು. ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ನಗದು ರಹಿತ ಚಿಕಿತ್ಸೆ ನೀಡುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಕೂಡಲೇ ಜಾರಿಗೊಳಿಸುವುದು ಎಂದು ಸಹ ಬೇಡಿಕೆ ಇಡಲಾಗಿದೆ.
ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾ ರಿಗಳು ತಾಲೂಕು, ಜಿಲ್ಲಾ ಮತ್ತು ರಾಜ್ಯ ಮಟ್ಟ ದಲ್ಲಿ ಈ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಶಾಸಕರು,ಸಚಿವರು, ವಿಧಾನ ಪರಿಷತ್ ಸದಸ್ಯರ ನ್ನು ಭೇಟಿ ಮಾಡಿ ಮನವಿಗಳನ್ನು ಈಗಾಗಲೇ ಸಲ್ಲಿಕೆ ಮಾಡಿದ್ದಾರೆ ಎಂದರು.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..