SSLC ಪರೀಕ್ಷಾ ವೇಳಾ ಪಟ್ಟಿ ಪ್ರಕಟ

Suddi Sante Desk

ಬೆಂಗಳೂರು –

SSLC ಪರೀಕ್ಷಾ ವೇಳಾಪಟ್ಟಿ ಪ್ರಕಟಗೊಂಡಿದೆ. ಜೂನ್ 14 ರಿಂದ 25 ರವರೆಗೆ ಪರೀಕ್ಷೆ ನಡೆಯಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು ಈ ಬಾರಿ ಪರೀಕ್ಷಾ ಅವಧಿ 3 ಗಂಟೆ 15 ನಿಮಿಷಗಳ ಕಾಲ ಇರಲಿದ್ದು, ಜೂನ್ 14ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭವಾಗಲಿದೆ ಎಂದರು.

ಫೆಬ್ರವರಿ 1ರಿಂದ 9ನೇ ತರಗತಿ, 10ನೇ ತರಗತಿ ಹಾಗೂ 11, 12ನೇ ತರಗತಿಗಳು ಪೂರ್ಣ ಪ್ರಮಾಣದಲ್ಲಿ ಆರಂಭವಾಗಲಿದೆ. 1-5ನೇ ತರಗತಿ ಆರಂಭಿಸುವ ಬಗ್ಗೆ ಫೆಬ್ರವರಿ 2ನೇ ವಾರದಿಂದ ನಿರ್ಧರಿಸಲಾಗುವುದು ಎಂದು ಹೇಳಿದರು.

ಇನ್ನು ಖಾಸಗಿ ಶಾಲೆಗಳ ಶುಲ್ಕ ನಿಗದಿ ಬಗ್ಗೆ ಇಂದಿನ ಸಭೆಯಲ್ಲಿ ನಿರ್ಧಾರವಾಗಿಲ್ಲ. ಶುಲ್ಕ ನಿಗದಿ ಬಗ್ಗೆ ಪ್ರತ್ಯೇಕ ಸಲಹಾ ಸಮಿತಿ ಜೊತೆ ಚರ್ಚಿಸಬೇಕಿದೆ. ಆ ಬಳಿಕ ಈ ಬಗ್ಗೆ ಸಿಎಂ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.