ಶಿವಮೊಗ್ಗ –
ರಸ್ತೆ ದಾಟುವಾಗ ಪೊಲೀಸ್ ಪೇದೆಯೊಬ್ಬರಿಗೆ ಕಾರು ಡಿಕ್ಕಿಯಾದ ಘಟನೆ ಶಿವಮೊಗ್ಗ ದಲ್ಲಿ ನಡೆದಿದೆ.

ನಗರದ ಖಾಸಗಿ ಹೊಟೇಲ್ ನಲ್ಲಿ ಬಿಜೆಪಿ ಪಕ್ಷದ ಕಾರ್ಯಕಾರಣಿ ನಡೆಯುತ್ತಿತ್ತು.ಕಾರ್ಯಕ್ರಮ ಮುಗಿದ ನಂತರ ಈ ಒಂದು ಹೋಟೆಲ್ ಎದುರಿಗೆ ಭದ್ರತೆಗೆ ಬಂದಿದ್ದ ಪೊಲೀಸ್ ಪೇದೆಗೆ ಕಾರು ಡಿಕ್ಕಿ ಹೊಡೆದಿದೆ.

ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಗೆ ಗಂಭೀರ ಗಾಯಗೊಂಡಿದ್ದಾರೆ. ಶಿವಮೊಗ್ಗ ಎಸ್ಪಿ ಆಫೀಸ್ ನಲ್ಲಿ ಕಾರ್ಯನಿರ್ವಹಿಸುವ ಜುಲ್ಫೀಕರ್ ಗಾಯಗೊಂಡ ಪೊಲೀಸ್ ಪೇದೆಯಾಗಿದ್ದಾರೆ.

ಅಪಘಾತದ ರಭಸಕ್ಕೆ ಗಂಭೀರವಾಗಿ ಗಾಯಗೊಂಡ ಪೊಲೀಸ್ ಪೇದೆಯವರನ್ನು ಕೂಡಲೇ ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಯಿತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಪೇದೆ ಸಾವಿಗೀಡಾಗಿದ್ದಾರೆ.

ಬಿಜೆಪಿ ಕಾರ್ಯಕಾರಣಿ ಸಭೆಯ ಬಂದೋಬಸ್ತ್ ಗೆ ನಿಯೋಜನೆ ಯಾಗಿದ್ದ ಜುಲ್ಫಿಕರ್ ಕರ್ತವ್ಯ ಮುಗಿಸಿಕೊಂಡು ಹೋಗುವಾಗ ರಸ್ತೆ ಅಪಘಾತಕ್ಕೆ ಬಲಿಯಾಗಿದ್ದಾರೆ.

ಹೋಟೆಲ್ ಮುಂಭಾಗದಲ್ಲಿ ರಸ್ತೆ ದಾಟುವ ವೇಳೆ ಕಾರು ಡಿಕ್ಕಿ ಹೊಡೆದಿದೆ.ಸಾಗರದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ ಕಾರು.

ಕಾರು ಚಾಲಕನನ್ನು ಪೊಲೀಸರ ವಶಕ್ಕೆ ತೆಗೆದುಕೊಂಡಿದ್ದಾರೆ.ತುಂಗಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.