ಧಾರವಾಡ –
ಮಾರ್ಚ್ 2 ರಿಂದ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಸಾಂಸ್ಕ್ರತಿಕ ಸ್ಪರ್ಧೆಗಳು – ಕ್ರೀಡಾಕೂಟದ ಸಾಂಸ್ಕ್ರತಿಕ ಕಾರ್ಯಕ್ರಮಗಳ ಮಾಹಿತಿ ನೀಡಿದ ಜಿಲ್ಲಾಧ್ಯಕ್ಷ ಎಸ್ ಎಫ್ ಸಿದ್ದನಗೌಡರ ಹೌದು
ಮಾರ್ಚ್ 2 ರಿಂದ ಎರಡು ದಿನಗಳ ಕಾಲ ಧಾರವಾಡ ಜಿಲ್ಲಾ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕ್ರತಿಕ ಕಾರ್ಯಕ್ರಮಗಳು ನಡೆಯಲಿವೆ.ಈ ಕುರಿತಂತೆ ಧಾರವಾಡ ಜಿಲ್ಲಾ ಸರ್ಕಾರಿ ನೌಕರರ ಜಿಲ್ಲಾಧ್ಯಕ್ಷ ಎಸ್ ಎಫ್ ಸಿದ್ದನಗೌಡರ ಮಾಹಿತಿ ನೀಡಿದರು. ಮಾರ್ಚ್ 2 ಮತ್ತು 3 ರಂದು ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕತಿಕ ಸ್ಪರ್ಧೆಗಳು ನಡೆಯಲಿದ್ದು
ಜಿಲ್ಲಾಡಳಿತ ಜಿಲ್ಲಾ ಪಂಚಾಯತ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾ ಘಟಕದ ಸಹಯೋಗದಲ್ಲಿ ಈ ಒಂದು ರಾಜ್ಯ ಸರಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿದೆ. ಮಾರ್ಚ್ 2 ರಂದು ಬೆಳಗ್ಗೆ 10 ಗಂಟೆಗೆ ಆರ್.ಎನ್.ಶೆಟ್ಟಿ ಕ್ರೀಡಾಂಗಣದಲ್ಲಿ ಆಯೋ ಜಿಸಲಾಗಿದ್ದು
ಮಾರ್ಚ್ 3 ರಂದು ಬೆಳಗ್ಗೆ 10 ಗಂಟೆಗೆ ಸಾಂಸ್ಕತಿಕ ಸ್ಪರ್ಧೆಗಳ ಉದ್ಘಾಟನಾ ಸಮಾರಂ ಭವನ್ನು ಕುಲಪುರೋಹಿತ ಆಲೂರು ವೆಂಕಟ ರಾವ ಸಾಂಸ್ಕೃತಿಕ ಭವನದಲ್ಲಿ ಹಮ್ಮಿಕೊಳ್ಳಲಾ ಗಿದೆ ಕೇಂದ್ರ ಸಂಸದೀಯ ವ್ಯವಹಾರಗಳ, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಲ್ಹಾದ ಜೋಶಿ, ವಿದಾನ ಪರಿಷತ್ತ ಸಭಾಪತಿ ಬಸವರಾಜ ಹೊರಟ್ಟಿ,ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ,
ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷರು ಹಾಗೂ ಶಾಸಕ ವಿನಯ ಕುಲಕರ್ಣಿ,ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿಯ ಅದ್ಯಕ್ಷರಾದ ಹಾಗೂ ಶಾಸಕ ಅಬ್ಬಯ್ಯ ಪ್ರಸಾದ, ವಾಯುವ್ಯ ಸಾರಿಗೆ ನಿಗಮದ ಅದ್ಯಕ್ಷ ಹಾಗೂ ಶಾಸಕ ಭರಮ್‍ಗೌಡ ಅಲಗೌಡ ಕಾಗೆ,ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಜೆ.ಎಂ.ಗಣೇಶ್ ಅವರು ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಗಳಾಗಿ ಆಗಮಿಸುವರು.
ಶಾಸಕ ಅರವಿಂದ ಚಂದ್ರಕಾಂತ ಬೆಲ್ಲದ ಅಧ್ಯಕ್ಷತೆ ವಹಿಸುವರು. ಶಾಸಕರಾದ ಎನ್.ಹೆಚ್ ಕೋನರಡ್ಡಿ ಎಸ್.ವಿ.ಸಂಕನೂರ, ಪ್ರದೀಪ್ ಶೆಟ್ಟರ,ಮಹೇಶ ಟೆಂಗಿನಕಾಯಿ, ಎಂ.ಆರ್. ಪಾಟೀಲ, ಹುಬ್ಬಳ್ಳಿ ಮಹಾನಗರ ಪಾಲಿಕೆಯ ಮಹಾಪೌರರಾದ ವೀಣಾ ಚೇತನ ಭರಧ್ವಾಡ ಅವರು ವಿಶೇಷ ಅತಿಥಿಗಳಾಗಿ ಆಗಮಿಸುವರು ಎಂದು ಜಿಲ್ಲಾಧ್ಯಕ್ಷ ಎಸ್.ಎಫ್.ಸಿದ್ದನಗೌಡರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಧಾರವಾಡ…..