ಬೆಂಗಳೂರು –
ಮಹಾ ಸಮ್ಮೇಳನ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ – ಮಹಾ ಸಮ್ಮೇಳನಕ್ಕೆ ಸಾಕ್ಷಿ ಯಾದ್ರು ನಾಡಿನ ಮೂಲೆ ಮೂಲೆಗಳಿಂದ ಆಗಮಿಸಿದ ಲಕ್ಷಾಂತರ ಸರ್ಕಾರಿ ನೌಕರರು
ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಕಾರ್ಯಕ್ರಮ ಬೆಂಗಳೂರಿನ ಅರಮನೆ ಮೈದಾನ ದಲ್ಲಿ ನಡೆಯಿತು.ರಾಜ್ಯ ಸರ್ಕಾರಿ ನೌಕರರ ಸಂಘವು ಹಮ್ಮಿಕೊಂಡಿದ್ದ ಐತಿಹಾಸಿಕ ಕಾರ್ಯ ಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.
ಇದಕ್ಕೂ ಮುನ್ನ ಸಂಘಟನೆಯ ರಾಜ್ಯಾಧ್ಯಕ್ಷ ಷಡಾಕ್ಷರಿ ಯವರು ಪ್ರಾಸ್ತಾವಿಕವಾಗಿ ಮಾತ ನಾಡುತ್ತಾ ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರೆಲ್ಲ ರನ್ನು ಪ್ರೀತಿಯಿಂದ ಸ್ವಾಗತಿಸಿ ರಾಜ್ಯ ಸರ್ಕಾರಿ ನೌಕರರ ಕೆಲವೊಂದಿಷ್ಟು ಬೇಡಿಕೆಗಳನ್ನು ವೇದಿಕೆಯ ಮೇಲಿದ್ದ ಮುಖ್ಯಮಂತ್ರಿಯವರ ಮುಂದೆ ಇಟ್ಟರು.ಮುಖ್ಯಮಂತ್ರಿಯವರ ಕಾರ್ಯವೈಖರಿ ಕುರಿತಂತೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದ ಷಡಾಕ್ಷರಿಯವರು ಯಾವುದೇ ಹೋರಾಟವಿಲ್ಲದೇ ನಮ್ಮ ಎಲ್ಲಾ ಬೇಡಿಕೆಗಳನ್ನು ಈಡೇರಿಸಿದ್ದಾರೆ ಈಗಲೂ ಕೂಡಾ ಅದೇ ಭರವಸೆಯಲ್ಲಿ ರಾಜ್ಯ ಸರ್ಕಾರಿ ನೌಕರರು ಇದ್ದಾರೆ.
ಪ್ರಮುಖವಾಗಿ 7ನೇ ವೇತನ ಆಯೋಗ ಜಾರಿಗೆ,ಆರೋಗ್ಯ ಭಾಗ್ಯ,ಹಳೆ ಪಿಂಚಣಿ ಯೋಜನೆ ಶಿಕ್ಷಕರ ಕೆಲವೊಂದಿಷ್ಟು ಪ್ರಮುಖ ಸಮಸ್ಯೆಗಳನ್ನು ಕೂಡಾ ಗಮನ ಹರಿಸಿ ಈಡೇರಿಸಬೇಕಿದೆ.ಅಲ್ಲದೇ ಪೊಲೀಸ್ ಇಲಾಖೆಯ ನೌಕರರ ಸಮಸ್ಯೆಗಳನ್ನು ಇದರೊಂದಿಗೆ ಇನ್ನೂ ಕೆಲ ಇಲಾಖೆಗಳ ಸಮಸ್ಯೆಗಳನ್ನು ಮುಖ್ಯಮಂತ್ರಿಯವರ ಗಮನಕ್ಕೆ ತಗೆದುಕೊಂಡು ಬಂದು ಈ ಕೂಡಲೇ ಎಲ್ಲಾ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯ ಮಾಡಿ
ಬೇಡಿಕೆಗಳ ಪಟ್ಟಿಯನ್ನು ಇಟ್ಟರು.ಇನ್ನೂ ಈ ಒಂದು ಐತಿಹಾಸಿಕ ಸಮಾರಂಭದಲ್ಲಿ ನಾಡಿನ ಮೂಲೆ ಮೂಲೆಗಳಿಂದ ಲಕ್ಷಾಂತರ ಸರ್ಕಾರಿ ನೌಕರರು ಪಾಲ್ಗೊಂಡು ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾದ್ರು.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..