ಹುಬ್ಬಳ್ಳಿ –
ಶಾಕೀರ ಸನದಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ – HUDA ಅಧ್ಯಕ್ಷರಾಗಿ ನಾಳೆ ಅಧಿಕಾರ ವಹಿಸಿಕೊಳ್ಳಲಿರುವ ಶಾಕೀರ ಸನದಿ
ಹುಬ್ಬಳ್ಳಿ ಧಾರವಾಡ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾಗಿ ಶಾಕೀರ ಸನದಿ ಯವರು ನಾಳೆ ಅಧಿಕಾರವನ್ನು ವಹಿಸಿಕೊಳ್ಳಲಿ ದ್ದಾರೆ.ಕಳೆದ ವಾರವಷ್ಟೇ ರಾಜ್ಯ ಸರ್ಕಾರ ನಿಗಮ ಮಂಡಳಿಯ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಹೀಗಾಗಿ ಹುಬ್ಬಳ್ಳಿ ಧಾರವಾಡ ನಗರಾಭಿವೃದ್ದಿ ಪ್ರಾಧಿಕಾರಕ್ಕೆ ಶಾಕೀರ ಸನದಿ ಯವರನ್ನು ನೇಮಕ ಮಾಡಲಾಗಿದೆ.
ಹೀಗಾಗಿ ನಾಳೆ ನವನಗರದಲ್ಲಿರುವ ಪ್ರಾಧಿಕಾರದ ಕಚೇರಿಯಲ್ಲಿ ಬೆಳಿಗ್ಗೆ 11 ಗಂಟೆಗೆ ಅಧಿಕಾರವನ್ನು ವಹಿಸಿಕೊಳ್ಳಲಿದ್ದಾರೆ.ಈ ಒಂದು ಸಮಯದಲ್ಲಿ ಜಿಲ್ಲೆಯ ಪಕ್ಷದ ಶಾಸಕರು ಸಚಿವರು ಮಾಜಿ ಶಾಸಕರು ಸಚಿವರು ಸೇರಿದಂತೆ ಮುಖಂಡರು ಕಾರ್ಯಕರ್ತರು ಪಾಲ್ಗೊಳ್ಳಲಿದ್ದು
ಹೆಚ್ಚಿನ ಸಂಖ್ಯೆ ಯಲ್ಲಿ ಬೂತ್ ಮಟ್ಟದ ಅಧ್ಯಕ್ಷರು ಹಾಗೂ ಪಕ್ಷದ ಸಮಸ್ತ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿ ಸಬೇಕೆಂದು ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಲ್ತಾಫಹುಸೇನ್ ಹಳ್ಳೂರ ಅವರು ಕೋರಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ…..