ಬೆಂಗಳೂರು –
ರಾಜ್ಯ ಸರ್ಕಾರಿ ನೌಕರರಿಗೆ ವಿಶೇಷ ರಜೆ ಘೋಷಣೆ – ವಿಶೇಷ ರಜೆ ಘೋಷಣೆ ಮಾಡಿ ಅಧಿಕೃತ ಸುತ್ತೋಲೆ ಪ್ರಕಟಿಸಿದ ರಾಜ್ಯ ಸರ್ಕಾರ ಹೌದು ಕರ್ನಾಟಕ ಸರ್ಕಾರ ರಾಜ್ಯ ಸರ್ಕಾರಿ ನೌಕರರಿಗೆ ಮಾರ್ಚ್ 5, 6 ರಂದು ಎರಡು ದಿನಗಳ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಿ ಆದೇಶಿಸಿದೆ.
ಈ ಕುರಿತು ಅಧಿಕೃತ ಸುತ್ತೋಲೆ ಪ್ರಕಟಿಸಲಾಗಿದೆ ಸರ್ಕಾರದ ಉಪ ಕಾರ್ಯದರ್ಶಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಈ ಕುರಿತು ಆದೇಶ ಹೊರಡಿಸಿದ್ದಾರೆ.ಈ ಹಿಂದೆ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಮತ್ತು ಆಡಳಿತದಲ್ಲಿ ಕಾರ್ಯಕ್ಷಮತೆ ಕಾರ್ಯಾಗಾರದಲ್ಲಿ ಪಾಲ್ಗೊ ಳ್ಳಲು ಸಹ ರಜೆ ನೀಡಲಾಗಿತ್ತು ಕರ್ನಾಟಕ ರಾಜ್ಯ ಸರ್ಕಾರಿ ಎಸ್.ಸಿ./ ಎಸ್.ಟಿ. ನೌಕರರ ಸಮನ್ವಯ ಸಮಿತಿಯ ವತಿಯಿಂದ ದಿನಾಂಕ 05/03/2024ರಂದು ಬೆಂಗಳೂರಿನ ವಸಂತ ನಗರದಲ್ಲಿರುವ ಡಾ. ಅಂಬೇಡ್ಕರ್ ಭವನದಲ್ಲಿ ರಾಜ್ಯ ಮಟ್ಟದ 5ನೇ ಕರ್ನಾಟಕ ರಾಜ್ಯ ಸರ್ಕಾರಿ ಎಸ್.ಸಿ./ ಎಸ್.ಟಿ.
ನೌಕರರ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಹೇಳಿದೆ ಹಾಜರಾತಿ ಪ್ರಮಾಣ ಪತ್ರದ ಮಾಹಿತಿ ಸದರಿ ಸಮಾವೇಶದಲ್ಲಿ ಭಾಗವಹಿಸುವ ಬೆಂಗಳೂರು ನಗರ ಜಿಲ್ಲೆಯ ಸಂಘದ ಸದಸ್ಯರು ಅಧಿಕಾರಿ/ ನೌಕರರಿಗೆ ದಿನಾಂಕ 05/03/2024 ರಂದು ಒಂದು ದಿನ ಮಾತ್ರ ಹಾಗೂ ರಾಜ್ಯದ ಇತರೆ ಜಿಲ್ಲೆಗಳ ಸಂಘದ ಸದಸ್ಯ ಅಧಿಕಾರಿ/ ನೌಕರರಿಗೆ ಪ್ರಯಾಣ ದಿನಗಳೂ ಸೇರಿದಂತೆ ದಿನಾಂಕ 05/03/2024 ಮತ್ತು 06/03/2024 ರಂದು ಎರಡು ದಿನಗಳ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲಾಗಿದೆ
ಸದರಿ ಸಮ್ಮೇಳನದಲ್ಲಿ ಭಾಗವಹಿಸಿದ ಬಗ್ಗೆ ಸಮ್ಮೇಳನದ ಸಂಘಟಕರಿಂದ ಹಾಜರಾತಿ ಪ್ರಮಾಣ ಪತ್ರವನ್ನು ಪಡೆಯುವ ಷರತ್ತಿಗೊಳ. ಪಟ್ಟು ರಜೆಯನ್ನು ಮಂಜೂರು ಮಾಡಲು ಸಕ್ಷಮ ಪ್ರಾಧಿಕಾರ ಈ ರಜೆಯನ್ನು ಮಂಜೂರು ಮಾಡ ತಕ್ಕದ್ದು ಎಂದು ಸ್ಪಷ್ಟಪಡಿಸಲಾಗಿದೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಫೆಬ್ರವರಿ 27ರಂದು ಬೆಂಗಳೂರು ನಗರದ ಅರಮನೆ ಆವರಣದಲ್ಲಿ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಮತ್ತು ಆಡಳಿತದಲ್ಲಿ ಕಾರ್ಯ ಕ್ಷಮತೆ ಕಾರ್ಯಾಗಾರವನ್ನು ಆಯೋಜಿಸಿತ್ತು. ಸರ್ಕಾರಿ ನೌಕರರು ಇದರಲ್ಲಿ ಪಾಲ್ಗೊಳ್ಳಲು ರಜೆ ನೀಡಲಾಗಿತ್ತು.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..