ಬೆಂಗಳೂರು –
ರಾಜ್ಯ 7 ನೇ ರಾಜ್ಯ ವೇತನ ಆಯೋಗದ ಅಧ್ಯಕ್ಷರನ್ನು ಭೇಟಿ ಮಾಡಿದ ರಾಜ್ಯಾಧ್ಯಕ್ಷರಾದ ಸಿ ಎಸ್ ಷಡಾಕ್ಷರಿ ಮತ್ತು ಪದಾಧಿಕಾರಿಗಳು
ರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಾಕ್ಷರಿರವರು ಸಂಘದ ಪದಾಧಿಕಾರಿಗಳೊಂದಿಗೆ ಇಂದು 7ನೇ ರಾಜ್ಯ ವೇತನ ಆಯೋಗದ ಅಧ್ಯಕ್ಷರಾದ ಡಾ. ಸುಧಾಕರ್ ರಾವ್ ಹಾಗೂ ಸದಸ್ಯರನ್ನು ಭೇಟಿ ಮಾಡಿ ಸರ್ಕಾರಿ ನೌಕರರಿಂದ ವೇತನ ಆಯೋಗದ ಜಾರಿಗೆ ಸಂಬಂಧಿಸಿದಂತೆ ನಿರ್ಣಯ…
ತೆಗೆದುಕೊಳ್ಳಲು ಸಂಘದ ಮೇಲೆ ಒತ್ತಡ ಹೆಚ್ಚಾಗುತ್ತಿದೆ.ಮಹಾ ಸಮ್ಮೇಳನದಲ್ಲಿ ಮಾನ್ಯ ಮುಖ್ಯಮಂತ್ರಿಗಳು ಜಾರಿ ಮಾಡುವ ಭರವಸೆ ನೀಡಿರುತ್ತಾರೆ. ಆದ್ದರಿಂದ ತಾವುಗಳು 7 ನೇ ವೇತನ ಆಯೋಗದ ವರದಿಯನ್ನು ಶೀಘ್ರವಾಗಿ ಸರ್ಕಾರಕ್ಕೆ ಸಲ್ಲಿಸುವಂತೆ ಮನವಿ ಮಾಡಿದರು.
ಸಂಘದ ಮನವಿಗೆ ಪೂರಕವಾಗಿ ಪ್ರತಿಕ್ರಿಯಿಸಿದ ವೇತನ ಆಯೋಗದ ಅಧ್ಯಕ್ಷರು ವರದಿ ಸಲ್ಲಿಸುವ ನಿಟ್ಟಿನಲ್ಲಿ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳು ತ್ತಿದ್ದು ಶೀಘ್ರದಲ್ಲಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದೆಂದು ತಿಳಿಸಿದರು.
ಕೆಲವೇ ದಿನಗಳಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಕೆ ಯಾಗುವ ನಿರೀಕ್ಷೆ ಇದೆ.ಸಂಘಟನೆ ಸದೃಢ ವಾಗಿದೆ, ಕ್ರಿಯಾಶೀಲವಾಗಿದೆ ಎಂದರು.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..