ಬೆಂಗಳೂರು –
ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ ಅಧಿಕೃತವಾಗಿ ಹೊರಬಿತ್ತು ರಾಜ್ಯ ಸರ್ಕಾರದಿಂದ ಆದೇಶ ಶೇ.38.75ರಿಂದ 42.5ರಷ್ಟು ಹೆಚ್ಚಳ ಹೌದು ರಾಜ್ಯ ಸರ್ಕಾರ ರಾಜ್ಯದ ಸರ್ಕಾರಿ ನೌಕರರಿಗೆ ಡಿಎ ಹೆಚ್ಚಳ ಮಾಡಿ ಅಧಿಕೃತ ಆದೇಶ ವನ್ನು ಮಾಡಿದೆ.
ಶೇ.38.75ರಿಂದ ಶೇ.42.5ರಷ್ಟು ಹೆಚ್ಚಳ ಮಾಡಿ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ.ಈ ಕುರಿತಂತೆ ಇಂದು ಆರ್ಥಿಕ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿಯವರು ನಡವಳಿಯನ್ನು ಹೊರಡಿಸಿದ್ದು ಅದರಲ್ಲಿ 2018ರ ಪರಿಷ್ಕೃತ ತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜನವರಿ 2024 ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇಕಡ 38.75 ರಿಂದ ಶೇಕಡ 42.5 ಗೆ ಪರಿಷ್ಕರಿಸಿ ಮಂಜೂರು ಮಾಡಲು ಸರ್ಕಾರವು ಹರ್ಷಿಸುತ್ತದೆ ಎಂದಿದ್ದಾರೆ.
ತುಟ್ಟಿಭತ್ಯೆಯ ಉದ್ದೇಶಕ್ಕಾಗಿ “ಮೂಲ ವೇತನ” ಎಂದರೆ ಸರ್ಕಾರಿ ನೌಕರನು ಧಾರಣ ಮಾಡಿರುವ ಹುದ್ದೆಗೆ ಅನ್ವಯವಾಗುವ ವೇತನ ಶ್ರೇಣಿಯಲ್ಲಿ ಪಡೆಯುತ್ತಿರುವ ವೇತನವಾಗಿದ್ದು ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಸ್ಥಗಿತ ವೇತನ ಬಡ್ತಿಯನ್ನು ನೀಡಲಾಗಿದ್ದರೆ ಆ ಸ್ಥಗಿತ ವೇತನ ಬಡ್ತಿ
(ಆ) 2018ರ ಕರ್ನಾಟಕ ನಾಗರಿಕ ಸೇವಾ (ಪರಿಷ್ಕೃತ ವೇತನ) ನಿಯಮಗಳ ನಿಯಮ 3(ಸಿ) ಯನ್ನು ಓದಿಕೊಂಡು 7ನೇ ನಿಯಮದ (3)ನೇ ಉಪನಿಯಮದ ಮೇರೆಗೆ ನೀಡಲಾದ ವೈಯಕ್ತಿಕ ವೇತನ ಯಾವುದಾದರೂ ಇದ್ದರೆ, ಆ ವೈಯಕ್ತಿಕ ವೇತನ,(ಇ) ವೇತನ ಶ್ರೇಣಿಯ ಗರಿಷ್ಠ ಕ್ಕಿಂತ ಹೆಚ್ಚಾಗಿ ಅವನಿಗೆ ಮಂಜೂರು ಮಾಡಲಾ ಗಿರುವ ಹೆಚ್ಚುವರಿ ವೇತನ ಬಡ್ತಿ ಯಾವುದಾದ ರೂ ಇದ್ದಲ್ಲಿ ಅವುಗಳು ಸೇರುತ್ತವೆ.
ಮೂಲ ವೇತನಕ್ಕೆ ಮೇಲೆ ಸೂಚಿಸಿರುವುದನ್ನು ಹೊರತುಪಡಿಸಿ ಇತರೆ ಯಾವುದೇ ಉಪಲಬ್ಧಗ ಳನ್ನು ಸೇರಿಸತಕ್ಕದ್ದಲ್ಲ.ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾ ರರಿಗೆ ಮತ್ತು ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನ. ವನ್ನು ಪಡೆಯುತ್ತಿರುವಂತಹ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು
ಕುಟುಂಬ ನಿವೃತ್ತಿ ವೇತನದಾರರಿಗೂ ಸಹ ದಿನಾಂಕ 1ನೇ ಜನವರಿ 2024 ರಿಂದ ಜಾರಿಗೆ ಬರುವಂತೆ ಹಾಲಿ ಲಭ್ಯವಿರುವ ತುಟ್ಟಿಭತ್ಯೆಯ ದರಗಳನ್ನು ಮೂಲ ನಿವೃತ್ತಿ ವೇತನ/ಕುಟುಂಬ ನಿವೃತ್ತಿ ವೇತನದ ಪ್ರಸಕ್ತ ಶೇಕಡ 38.75 ರಿಂದ ಶೇಕಡ 42.5 ಕ್ಕೆ ಹೆಚ್ಚಿಸಿ ಮಂಜೂರು ಮಾಡಲು ಸಹ ಸರ್ಕಾರವು ಹರ್ಷಿಸುತ್ತದೆ.ಯುಜಿಸಿ ಎಐಸಿಟಿಸಿ ಐಸಿಎಆರ್ ವೇತನ ಶ್ರೇಣಿಗಳ ನಿವೃತ್ತ ವೇತನದಾರರಿಗೂ ಸಹ ಈ ಆದೇಶಗಳು ಅನ್ವಯಿಸುತ್ತವೆ.
ಸರ್ಕಾರದ ಮತ್ತು ಜಿಲ್ಲಾ ಪಂಚಾಯತ್‌ಗಳ ಪೂರ್ಣಾವಧಿ ನೌಕರರಿಗೆ, ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ವರ್ಕ್‌ಚಾರ್ಜ್ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನು ದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರುಗಳಿಗೆ ಈ ಆದೇಶ ಅನ್ವಯಿಸುತ್ತದೆ ಎಂದು ತಿಳಿಸಿದ್ದಾರೆ.
ಯುಜಿಸಿ/ಎಐಸಿಟಿಇ/ಐಸಿಎಆರ್ ವೇತನ ಶ್ರೇಣಿ ಗಳಲ್ಲಿ ಹಾಲಿ ವೇತನ ಪಡೆಯುತ್ತಿರುವ ನೌಕರ ರಿಗೆ ಮತ್ತು ಎನ್‌ಜೆಪಿಸಿ ವೇತನ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಆದೇಶಗಳನ್ನು ಹೊರಡಿಸಲಾಗುವುದು. ಈ ಆದೇಶದ ಮೇರೆಗೆ ಲಭ್ಯವಿರುವ ತುಟ್ಟಿಭತ್ಯೆ ಯನ್ನು ನಗದಾಗಿ ಪಾವತಿ ಮಾಡುವುದು.
ತುಟ್ಟಿಭತ್ಯೆಯ ಕಾರಣದಿಂದ ಸಂದಾಯ ಮಾಡ ಬೇಕಾಗಿರುವ ಐವತ್ತು ಪೈಸೆ ಹಾಗೂ ಅದಕ್ಕಿಂತ ಹೆಚ್ಚಿನ ಭಿನ್ನಾಂಕಗಳನ್ನು ಮುಂದಿನ ರೂಪಾಯಿಗೆ ಪೂರ್ಣಗೊಳಿಸತಕ್ಕದ್ದು ಮತ್ತು ಐವತ್ತು ಪೈಸೆಗಿಂತ ಕಡಿಮೆ ಇರುವ ಭಿನ್ನಾಂಕಗಳನ್ನು ಕಡೆಗಣಿಸತಕ್ಕದ್ದು. ತುಟ್ಟಿಭತ್ಯೆ ಬಾಕಿ ಮೊತ್ತವನ್ನು, 2024ರ ಮಾರ್ಚ್ ಮಾಹೆಯ ವೇತನ ಬಟವಾ ಡೆಗೂ ಮೊದಲು ಪಾವತಿ ಮಾಡತಕ್ಕದ್ದಲ್ಲ.
ತುಟ್ಟಿ ಭತ್ಯೆಯನ್ನು ಸಂಭಾವನೆಯ ವಿಶಿಷ್ಟ ಅಂಶವಾಗಿ ತೋರಿಸುವುದು ಮತ್ತು ಯಾವುದೇ ಉದ್ದೇಶಕ್ಕಾಗಿ ಇದನ್ನು ವೇತನ ಎಂದು ಪರಿಗಣಿ ಸಲಾಗುವುದಿಲ್ಲ ಎಂದು ಹೇಳಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..
			

		
			



















