ಬೆಂಗಳೂರು –
ಎಸ್ಎಸ್ಎಲ್ಸಿ ಪರೀಕ್ಷಾ ಕಾರ್ಯಕ್ಕೆ ಪ್ರೌಢ ಶಾಲಾ ಶಿಕ್ಷಕರು ಸಮ್ಮತಿ ನೀಡಿದ್ದು ಈ ಒಂದು ಕೂಡಲೇ ಅವರನ್ನು ನೇಮಕ ಮಾಡಿ ಕಾರ್ಯಕ್ಕೆ ಬಳಸಿಕೊಳ್ಳಲು ಇಲಾಖೆ ಸೂಚನೆನೀಡಿದೆ.ಹೌದು
ಎಸ್ಎಸ್ಎಲ್ಸಿ ಪರೀಕ್ಷಾ ಕಾರ್ಯಕ್ಕೆ ಪ್ರೌಢ ಶಾಲಾ ಸಹ ಶಿಕ್ಷಕರನ್ನು ನೇಮಿಸಿಕೊಳ್ಳಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅನುಮತಿ ನೀಡಿದೆ.
ಶಿಕ್ಷಕರು ಕರ್ತವ್ಯ ನಿರ್ವಹಿಸುತ್ತಿರುವ ಕ್ಲಸ್ಟರ್ ಹೊರತಾದ ಕೇಂದ್ರಗಳಿಗೆ ಕೊಠಡಿ ಮೇಲ್ವಿಚಾರ ಕರಾಗಿ ಹಾಗೂ ಪರೀಕ್ಷೆಯ ಇತರೆ ಕಾರ್ಯಗಳಿಗೆ ನಿಯೋಜಿಸಬೇಕು.ಆಯಾ ವಿಷಯಗಳ ಶಿಕ್ಷಕ ರನ್ನು ಅದೇ ವಿಷಯದ ದಿನ ಪರೀಕ್ಷಾ ಕಾರ್ಯಕ್ಕೆ ಬಳಸಿಕೊಳ್ಳಬಾರದು ಎಂದು ಸೂಚಿಸಿದೆ.
ಪ್ರೌಢಶಾಲಾ ಶಿಕ್ಷಕರ ಕೊರತೆ ಇದ್ದ ಕೇಂದ್ರಗಳಲ್ಲಿ ಮಾತ್ರ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಬಳಸಿ ಕೊಳ್ಳಲು ಸಮ್ಮತಿ ನೀಡಿದೆ.2023ರ ಮಾರ್ಚ್ ಏಪ್ರಿಲ್ನಲ್ಲಿ ನಡೆದ ಎಸ್ಎಸ್ಎಲ್ಸಿ ಪರೀಕ್ಷೆ ಯಲ್ಲಿ ನಕಲು ಮಾಡಲು ವಿದ್ಯಾರ್ಥಿಗಳಿಗೆ ಸಹಕ. ರಿಸಿದ ಆರೋಪದ ಮೇಲೆ 38 ಶಿಕ್ಷಕರನ್ನು ಅಮಾನತು ಮಾಡಲಾಗಿತ್ತು.
ಹಾಗಾಗಿ, 2024ರ ಪರೀಕ್ಷೆಯಲ್ಲಿ ನಕಲು, ವ್ಯವಹಾರಕ್ಕೆ ಸಂಪೂರ್ಣ ಕಡಿವಾಣ ಹಾಕಲು ಪರೀಕ್ಷಾ ಕಾರ್ಯಕ್ಕೆ ಪ್ರೌಢಶಾಲಾ ಸಹ ಶಿಕ್ಷಕರ ಬದಲು ಪ್ರಾಥಮಿಕ ಶಾಲಾ ಶಿಕ್ಷಕರನ್ನು ನೇಮಿ ಸಲು ಈಚೆಗೆ ಸುತ್ತೋಲೆ ಹೊರಡಿಸಲಾಗಿತ್ತು
ಈ ಕ್ರಮಕ್ಕೆ ಶಿಕ್ಷಕರು ವಿರೋಧ ವ್ಯಕ್ತಪಡಿಸಿದ್ದರು. ಸರ್ಕಾರದ ಕ್ರಮ ಸರಿಯಲ್ಲ ಎಂದು ಮರುಪರಿಶೀ ಲಿಸಬೇಕು ಎಂದು ವಿಧಾನಪರಿಷತ್ತಿನ ಸದಸ್ಯ ರಾದ ಪುಟ್ಟಣ್ಣ ಹಾಗೂ ಮರಿತಿಬ್ಬೇಗೌಡ ಅವರು ಸರ್ಕಾರಕ್ಕೆ ಪತ್ರ ಬರೆದಿದ್ದರು.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..